ಪುಣೆ: ಆಫ್ಘಾನಿಸ್ತಾನದ ವಿರುದ್ಧ ನಡೆದ ಏಕದಿನ ಕ್ರಿಕೆಟ್ ಸರಣಿ ವೇಳೆ ಬ್ಯಾಲ್ ವಿರೂಪಗೊಳಿಸಿರುವ ಆರೋಪದ ಮೇಲೆ ವೆಸ್ಟ್ ಇಂಡೀಸ್ ವಿಕೆಟ್ ಕೀಪರ್, ಬ್ಯಾಟ್ಸಮನ್ ಇದೀಗ ನಿಷೇಧಕ್ಕೊಳಗಾಗಿದ್ದಾರೆ.
ಆಫ್ಘಾನಿಸ್ತಾನದ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದ ವೇಳೆ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಯುವ ವಿಕೆಟ್ ಕೀಪರ್ ಇದೀಗ ನಾಲ್ಕು ಟಿ-20 ಪಂದ್ಯಗಳಿಂದ ಬ್ಯಾನ್ಗೊಳಗಾಗಿದ್ದಾರೆ.
ಐಸಿಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಕ್ಕಾಗಿ ಅವರ ಮೇಲೆ ಈ ನಿಷೇಧ ಹೇರಿರುವ ಐಸಿಸಿ, ಮೂರು ನಿಷೇಧ ಪಾಯಿಂಟ್ ಸಹ ನೀಡಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಪೂರನ್ ನಾನು ಮಾಡಿದ್ದು ತಪ್ಪು, ಐಸಿಸಿ ನೀಡಿರುವ ತೀರ್ಪಿಗೆ ನಾನು ಬದ್ಧನಾಗಿರುವೆ ಎಂದು ಸಾರ್ವಜನಿಕವಾಗಿ ಕ್ಷಮೆಯಾಚನೆ ಮಾಡಿದ್ದಾರೆ.
ಇದೀಗ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡ ಆಫ್ಘಾನಿಸ್ತಾನದೊಂದಿಗೆ ಮೂರು ಟಿ20 ಪಂದ್ಯಗಳನ್ನಾಡಲಿದ್ದು, ಅದರಲ್ಲಿ ಪೂರನ್ ಭಾಗಿಯಾಗುವಂತಿಲ್ಲ. ಇದಾದ ಬಳಿಕ ಟೀಂ ಇಂಡಿಯಾ ವಿರುದ್ಧ ನಡೆಯುವ ಮೂರು ಟಿ-20 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಭಾಗಿಯಾಗುವಂತಿಲ್ಲ.
ಈ ಹಿಂದೆ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಟೆಸ್ಟ್ ಪಂದ್ಯವೊಂದರಲ್ಲಿ ಬಾಲ್ ವಿರೂಪಗೊಳಿಸಿದ ಆರೋಪದ ಮೇಲೆ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಹಾಗೂ ಸ್ಮಿತ್ ಒಂದು ವರ್ಷಗಳ ಕಾಲ ನಿಷೇಧಕ್ಕೊಳಗಾಗಿದ್ದರು.