ಮುಂಬೈ:ಟೀಂ ಇಂಡಿಯಾ ಹಿರಿಯ ಪ್ಲೇಯರ್ ಎಂಎಸ್ ಧೋನಿ ನಿಗದಿತ ಓವರ್ಗಳ ಕ್ರಿಕೆಟ್ನಿಂದ ನಿವೃತ್ತಿ ಪಡೆದುಕೊಳ್ಳಲಿದ್ದಾರೆ ಎಂಬ ಸುದ್ದಿಗೆ ಆಯ್ಕೆ ಸಮಿತಿ ಮುಖ್ಯಸ್ಥ ಖಾರವಾಗಿ ಪ್ರತಿಕ್ರಿಯಿಸಿದ್ದು, ಅದೊಂದು ಸುಳ್ಳು ಸುದ್ದಿ ಎಂದು ತಿಳಿಸಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ಮುಂಬರುವ ಟೆಸ್ಟ್ ಸರಣಿಗಾಗಿ ಟೀಂ ಇಂಡಿಯಾ ಪ್ರಕಟಗೊಳಿಸಿ ಮಾತನಾಡಿದ ಅವರು, ಎಂಎಸ್ ಧೋನಿ ನಿವೃತ್ತಿ ಪಡೆದುಕೊಳ್ಳುವುದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಸದ್ಯ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದು ತಿಳಿಸಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ದದ ಕ್ರಿಕೆಟ್ ಸರಣಿಯಿಂದ ಹೊರಗುಳಿದಿದ್ದ ಮಿಸ್ಟರ್ ಕೂಲ್, ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಕ್ರಿಕೆಟ್ ಸರಣಿಯಿಂದಲೂ ಹೊರಗುಳಿದಿದ್ದಾರೆ. ಹೀಗಾಗಿ ಅವರು ಕ್ರಿಕೆಟ್ಗೆ ವಿದಾಯ ಘೋಷಣೆ ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಇದರ ಮಧ್ಯೆ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಶೇರ್ ಮಾಡಿದ್ದ ಪೋಟೋವೊಂದು ಇದಕ್ಕೆ ಮತ್ತಷ್ಟು ಪುಷ್ಠಿ ನೀಡಿತ್ತು. ಕಳೆದ ಫೆಬ್ರುವರಿಯಲ್ಲಿ ಟೀಂ ಇಂಡಿಯಾ ಪರ ಕೊನೇಯ ಟಿ-20 ಪಂದ್ಯವನ್ನಾಡಿರುವ ಧೋನಿ ಸದ್ಯ ಕ್ರಿಕೆಟ್ನಿಂದ ವಿಶ್ರಾಂತಿ ಪಡೆದುಕೊಂಡಿದ್ದಾರೆ.