ಹೈದರಾಬಾದ್ :ಭಾರತ ಮಹಿಳಾ ಏಕದಿನ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಮತ್ತೊಂದು ದಾಖಲೆ ಬರೆದಿದ್ದಾರೆ. ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 7 ಸಾವಿರ ರನ್ ಗಳಿಸಿದ ಮೊದಲ ಭಾರತೀಯ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಪ್ರಸ್ತುತ ಭಾರತ ಮಹಿಳಾ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿ ಆಡುತ್ತಿದೆ. ಸರಣಿಯ 4ನೇ ಪಂದ್ಯದಲ್ಲಿ ಮಿಥಾಲಿ ರಾಜ್ ಈ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ಮಿಥಾಲಿ ರಾಜ್ 45 ರನ್ಗಳಿಸಿ ಔಟಾದರು.
38 ವರ್ಷದ ಮಹಿಳಾ ಕ್ರಿಕೆಟರ್ ಮಿಥಾಲಿ ರಾಜ್ 1999 ರಲ್ಲಿ ಐರ್ಲೆಂಡ್ ವಿರುದ್ಧ ಏಕದಿನ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದರು. ಭಾರತ ಪರ 213 ಏಕದಿನ ಪಂದ್ಯಗಳನ್ನಾಡಿರುವ ಮಿಥಾಲಿ, 50 ಸರಾಸರಿಯಲ್ಲಿ 7019 ರನ್ಗಳಿಸಿದ್ದಾರೆ. 7,000 ರನ್ ಗಡಿ ದಾಟಿರುವ ಮಿಥಾಲಿ ರಾಜ್, ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ಗಳಿಸಿದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.