ಕರಾಚಿ:ಯುವ ಬೌಲರ್ ನಸೀಮ್ ಶಾ, ಕೇವಲ 16 ವರ್ಷಕ್ಕೆ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ ಪಾಕಿಸ್ತಾನದ ಕಿರಿಯ ಆಟಗಾರ ಎನಿಸಿಕೊಂಡಿದ್ದರು. ಇದೀಗ 5 ವಿಕೆಟ್ ಪಡೆದ ವಿಶ್ವದ ಅತ್ಯಂತ ಕಿರಿಯ ಬೌಲರ್ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.
475 ರನ್ಗಳ ಬೃಹತ್ ಮೊತ್ತದ ಗುರಿ ನೀಡಿದ್ದ ಪಾಕಿಸ್ತಾನ ತಂಡ ಶ್ರೀಲಂಕಾ ತಂಡವನ್ನು 212 ರನ್ಗಳಿಗೆ ಆಲೌಟ್ ಮಾಡುವ ಮೂಲಕ 263 ರನ್ಗಳ ಜಯ ಸಾಧಿಸಿತು.
ಈ ಪಂದ್ಯದಲ್ಲಿ 31 ರನ್ ನೀಡಿ 5 ವಿಕೆಟ್ ಪಡೆದು ಗೆಲುವಿನ ರೂವಾರಿಯಾಗಿದ ನಸೀಮ್ ಶಾ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 5 ವಿಕೆಟ್ ಗೊಂಚಲು ಪಡೆದ ಅತ್ಯಂತ ಕಿರಿಯ ವೇಗದ ಬೌಲರ್ ಎಂಬ ಶ್ರೇಯಕ್ಕೆ ಪಾತ್ರರಾದರು.
ನಸೀಮ್ 16 ವರ್ಷ 307 ದಿನಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಈ ಹಿಂದೆ ಪಾಕಿಸ್ತಾನದವರೇ ಆದ ಮೊಹಮ್ಮದ್ ಅಮೀರ್ ಈ ದಾಖಲೆ ನಿರ್ಮಿಸಿದ್ದರು. ಅವರು 17 ವರ್ಷ 257 ದಿನಗಳಲ್ಲಿ ಈ ಸಾಧನೆ ಮಾಡಿದ್ದಾರೆ.
ಆದರೆ ಸ್ಪಿನ್ ಬೌಲರ್ ನಸೀಮ್ ಉಲ್ ಘಾನಿ 16 ವರ್ಷ 303 ದಿನಗಳಿಗೆ 5 ವಿಕೆಟ್ ಪಡೆದ ಅತ್ಯಂತ ಕಿರಿಯ ಬೌಲರ್ ಎಂಬ ದಾಖಲೆಯನ್ನು ಹೊಂದಿದ್ದಾರೆ.