ಢಾಕಾ:ಪಾಕಿಸ್ತಾನವು ವಿಶ್ವದ ಸುರಕ್ಷಿತ ಸ್ಥಳಗಳಲ್ಲಿ ಒಂದಾಗಿದೆ ಎಂದು ವೆಸ್ಟ್ ಇಂಡೀಸ್ ಕ್ರಿಕೆಟ್ ಆಟಗಾರ ಕ್ರಿಸ್ ಗೇಲ್ ಅಭಿಪ್ರಾಯಪಟ್ಟಿದ್ದಾರೆ.
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಬಿಪಿಎಲ್ ಟೂರ್ನಿಯಲ್ಲಿ ಆಡುತ್ತಿರುವ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ದೈತ್ಯ, ಕ್ರಿಸ್ ಗೇಲ್ ಪಾಕಿಸ್ತಾನವನ್ನ ಪ್ರಪಂಚದ ಸುರಕ್ಷಿತ ಸ್ಥಳಗಳಲ್ಲಿ ಒಂದು ಎಂದಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಗೇಲ್, 'ಸದ್ಯ ಪಾಕಿಸ್ತಾನವು ವಿಶ್ವದ ಸುರಕ್ಷಿತ ಸ್ಥಳಗಳಲ್ಲಿ ಒಂದಾಗಿದೆ. ಅಧ್ಯಕ್ಷರಿಗೆ ನೀಡುವ ಭದ್ರತೆ ನೀಡುತ್ತೇವೆ ಎಂದು ಅವರು ಹೇಳುತ್ತಾರೆ. ಹಾಗಿದ್ದರೆ ನಾವು ಸುರಕ್ಷಿತ ಎಂದರ್ಥ. ಬಾಂಗ್ಲಾದಲ್ಲೂ ನಾನು ಸುರಕ್ಷಿತವಾಗಿದ್ದೇವೆ ಎಂದಿದ್ದಾರೆ ಗೇಲ್.