ನವದೆಹಲಿ:ಕ್ರಿಕೆಟ್ ದೇವರೆಂದೇ ಖ್ಯಾತರಾಗಿರುವ ಸಚಿನ್ ತೆಂಡೂಲ್ಕರ್ ಅವರ 100 ಶತಕಗಳ ವಿಶ್ವದಾಖಲೆಯನ್ನು ವಿರಾಟ್ ಕೊಹ್ಲಿ ಮುರಿಯಲಿದ್ದಾರೆ ಎಂದು ಭಾರತ ತಂಡದ ಮಾಜಿ ಆಲ್ರೌಂಡರ್ ಇರ್ಫಾನ್ ಪಠಾಣ್ ಅಭಿಪ್ರಾಯಪಟ್ಟಿದ್ದಾರೆ.
2013ರಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವ ಸಚಿನ್ ಟೆಸ್ಟ್ನಲ್ಲಿ 51 ಹಾಗೂ ಏಕದಿನ ಕ್ರಿಕೆಟ್ನಲ್ಲಿ 49 ಶತಕ ಸಿಡಿಸಿದ್ದಾರೆ. ಒಟ್ಟಾರೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 100 ಶತಕ ಸಿಡಿಸಿರುವ ವಿಶ್ವದ ಏಕೈಕ ಬ್ಯಾಟ್ಸ್ಮನ್ ಎಂಬ ವಿಶ್ವದಾಖಲೆಯನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ. ಆದರೆ ಭವಿಷ್ಯದಲ್ಲಿ ಈ ದಾಖಲೆಯನ್ನು ಮುರಿಯಲು ಯಾರಿಂದಲಾದರೂ ಸಾಧ್ಯವಾಗುತ್ತದೆ ಎನ್ನುವುದಾದರೆ ಅದು ವಿರಾಟ್ ಕೊಹ್ಲಿ ಮಾತ್ರ ಎಂದು ಪಠಾಣ್ ತಿಳಿಸಿದ್ದಾರೆ.
ಶತಕಗಳ ಶತಕದ ಬಗ್ಗೆ ವಿರಾಟ್ ಕೊಹ್ಲಿ ಎಲ್ಲೂ ಮಾತನಾಡದಿರಬಹುದು. ಆದರೆ ಈ ಸಾಧನೆಯನ್ನು ಸಚಿನ್ ತೆಂಡೂಲ್ಕರ್ ಅವರ ನಂತರ ಯಾರಾದರೂ ಮಾಡಲಿದ್ದಾರೆ ಎಂದರೆ ಅದು ವಿರಾಟ್ ಮಾತ್ರ ಎಂದು ಸ್ಟಾರ್ಸ್ಫೋರ್ಟ್ಸ್ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.