ಕೋಲ್ಕತ್ತಾ:ಬಂಗಾಳ ಕ್ರಿಕೆಟ್ ಸಂಸ್ಥೆಯ(ಸಿಎಬಿ) ಕಾರ್ಯದರ್ಶಿಯಾಗಿರುವ ಸೌರವ್ ಗಂಗೂಲಿ ಸಹೋದರ ಸ್ನೇಹಶಿಶ್ ಗಂಗೂಲಿ ಅವರಿಗೆ ಕೊರೊನಾ ವೈರಸ್ ತಗುಲಿದೆ ಎಂಬ ಸುದ್ದಿ ಹರಡಿತ್ತು. ಅದಕ್ಕೆ ಖುದ್ದಾಗಿ ಅವರೇ ಸ್ಪಷ್ಟನೆ ನೀಡಿದ್ದಾರೆ.
ನನಗೆ ಕೊರೊನಾ ವೈರಸ್ ಹಬ್ಬಿದೆ ಎಂದು ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಬಿತ್ತರಗೊಳ್ಳುತ್ತಿದ್ದು, ಅದು ಸತ್ಯಕ್ಕೆ ದೂರವಾದ ಮಾತು. ನಾನು ಸಂಪೂರ್ಣವಾಗಿ ಫಿಟ್ ಆಗಿರುವೆ ಎಂದಿದ್ದಾರೆ. ಸ್ನೇಹಶಿಶ್ ಗಂಗೂಲಿ ಅವರ ಪತ್ನಿಗೆ ಕೋವಿಡ್-19 ಇರುವುದು ಖಚಿತಗೊಂಡಿದೆ ಎಂದು ಪಶ್ಚಿಮ ಬಂಗಾಳದ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿ ಈಗಾಗಲೇ ಮಾಹಿತಿ ನೀಡಿದ್ದಾರೆ.