ಅಬುಧಾಬಿ: 13ನೇ ಆವೃತ್ತಿಯ ಚೊಚ್ಚಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ವಿಕೆಟ್ ಪಡೆಯುವ ಮೂಲಕ ಐಪಿಎಲ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಮೂರನೇ ಬೌಲರ್ ಎಂಬ ಖ್ಯಾತಿಗೆ ಪಿಯೂಷ್ ಚಾವ್ಹಾ ಭಾಜನರಾಗಿದ್ದಾರೆ.
ಈ ಹಿಂದೆ ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಆಡಿದ್ದ ಪಿಯೂಷ್ ಚಾವ್ಲಾ, ಇದೀಗ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡಿದ ಮೊದಲ ಪಂದ್ಯದಲ್ಲಿ ಸ್ಪಿನ್ನರ್ ಹರ್ಭಜನ್ ಸಿಂಗ್(150 ವಿಕೆಟ್) ದಾಖಲೆ ಹಿಂದಿಕ್ಕಿ ಗರಿಷ್ಠ ವಿಕೆಟ್ ಪಡೆದವರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ.