ಹಿರಿಯ ಕ್ರಿಕೆಟಿಗ ರಾಹುಲ್ ದ್ರಾವಿಡ್ ಇತ್ತಿಚೇಗೆ ಎನ್‌ಸಿಎ (ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ) ಮುಖ್ಯಸ್ಥರಾಗಿ ನೇಮಕಗೊಂಡಿದ್ದರು. ಜುಲೈ ಒಂದರಂದು ಎನ್‌ಸಿಎ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಬೇಕಿತ್ತು. ಆದ್ರೆ ಅವರ ಮೇಲೆ ಹಿತಾಸಕ್ತಿ ಸಂಘರ್ಷದ ಆರೋಪ ಕೇಳಿಬಂದಿರುವುದರಿಂದ ಅವರು ಪದಗ್ರಹಣದಿಂದ ದೂರ ಉಳಿದಿದ್ದಾರೆ.
ಬಿಸಿಸಿಐ ನಿಯಮದ ಅನುಸಾರ ಮಂಡಳಿಯಲ್ಲಿ ಕಾರ್ಯನಿರ್ವಹಿಸುವವರು ಒಂದಕ್ಕಿಂತ ಹೆಚ್ಚು ಲಾಭದಾಯಕ ಹುದ್ದೆಗಳನ್ನು ಹೊಂದಿರುವಂತಿಲ್ಲ. ಈಗಾಗಲೇ ದ್ರಾವಿಡ್ ಅವರು ಇಂಡಿಯಾ ಸಿಮೆಂಟ್ಸ್‌ನ ಉದ್ಯೋಗಿಯಾಗಿದ್ದಾರೆ. ಎನ್‌ಸಿಎ ಮುಖ್ಯಸ್ಥರಾಗಿಯೂ ಅಧಿಕಾರ ವಹಿಸಿಕೊಂಡರೆ ಹಿತಾಸಕ್ತಿ ಸಂಘರ್ಷ ಉಲ್ಲಂಘಿಸಿದಂತಾಗುತ್ತದೆ.