ನವದೆಹಲಿ: ಕಳೆದೆರಡು ದಿನಗಳ ಹಿಂದೆ ಜಮ್ಮು- ಕಾಶ್ಮೀರದ ಹಂದ್ವಾರದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಮೇಜರ್, ಕರ್ನಲ್ ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದು, ಅವರ ಧೈರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದಾರೆ.
ಇದೀಗ ಟೀಂ ಇಂಡಿಯಾ ಪ್ಲೇಯರ್ ಪೃಥ್ವಿ ಶಾ ಸಂತಾಪ ಸೂಚಿಸಿದ್ದು, ಗೌರವ ಸಲ್ಲಿಕೆ ಮಾಡಿದ್ದಾರೆ. ಇಂತಹ ಕಠಿಣ ಸಮಯದಲ್ಲಿ ನಮ್ಮ ಸೈನಿಕರು ಹಂದ್ವಾರ್ ಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ನಮ್ಮ ರಾಷ್ಟ್ರ ರಕ್ಷಿಸಲು ಅವರು ಮಾಡಿದ ತ್ಯಾಗ ನಮ್ಮ ಮನದಲ್ಲಿ ಶಾಶ್ವತವಾಗಿ ಉಳಿಯುತ್ತವೆ. ಹುತಾತ್ಮರಾದ ಪ್ರತಿಯೊಬ್ಬ ಯೋಧರಿಗೂ ನಮಸ್ಕರಿಸುತ್ತೇವೆ ಮತ್ತು ಅವರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪ ಎಂದು ಟ್ವೀಟ್ ಮಾಡಿದ್ದಾರೆ.