ಮೆಲ್ಬೋರ್ನ್:ಆಸ್ಟ್ರೇಲಿಯಾ ವಿರುದ್ಧ ಜನವರಿ 7ರಿಂದ ಟೀಂ ಇಂಡಿಯಾ 3ನೇ ಟೆಸ್ಟ್ ಪಂದ್ಯದಲ್ಲಿ ಭಾಗಿಯಾಗಲು ತಯಾರಿ ನಡೆಸಿದ್ದು, ಇದರ ಮಧ್ಯೆ ರಹಾನೆ ಪಡೆಗೆ ಮತ್ತೊಂದು ಚಿಂತೆ ಎದುರಾಗಿದೆ.
ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಚೇತೇಶ್ವರ್ ಪೂಜಾರಾ ನೆಟ್ ಅಭ್ಯಾಸದ ವೇಳೆ ಗಾಯಗೊಂಡಿದ್ದಾಗಿ ತಿಳಿದು ಬಂದಿದೆ.
ಈಗಾಗಲೇ ಟೀಂ ಇಂಡಿಯಾದ ವೇಗಿಗಳಾದ ಉಮೇಶ್ ಯಾದವ್ ಹಾಗೂ ಮೊಹಮ್ಮದ್ ಶಮಿ ಗಾಯಗೊಂಡು ಟೆಸ್ಟ್ನಿಂದ ಹೊರಗುಳಿದಿದ್ದಾರೆ. ಇದರ ಮಧ್ಯೆ ಪೂಜಾರಾ ಗಾಯಗೊಂಡಿರುವುದು ತಂಡಕ್ಕೆ ಮತ್ತಷ್ಟು ತಲೆನೋವಾಗಿದೆ.
ಚೆಂಡು ಬಲಗೈಗೆ ಬಡಿದಿರುವ ಕಾರಣ ಅವರು ಗಾಯಗೊಂಡಿದ್ದಾಗಿ ತಿಳಿದು ಬಂದಿದೆ. ಜತೆಗೆ ಅವರು ಅಭ್ಯಾಸ ಮೊಟಕುಗೊಳಿಸಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.