ಪಂಜಾಬ್:ಟೀಂ ಇಂಡಿಯಾ ಕಂಡ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಯುವರಾಜ್ ಸಿಂಗ್ ಕೂಡ ಒಬ್ಬರು. ಟೀಂ ಇಂಡಿಯಾ ಪರ ಅದ್ಭುತ ಪ್ರದರ್ಶನ ನೀಡಿರುವ ಈ ಪ್ಲೇಯರ್ 2019ರಲ್ಲಿ ಎಲ್ಲ ಮಾದರಿ ಕ್ರಿಕೆಟ್ನಿಂದ ನಿವೃತ್ತಿ ಪಡೆದುಕೊಂಡಿದ್ದಾರೆ. ಆದರೆ ಇದೀಗ ಪಂಜಾಬ್ ಕ್ರಿಕೆಟ್ ಮಂಡಳಿ ಅವರ ಬಳಿ ವಿಶೇಷ ಮನವಿ ಮಾಡಿಕೊಂಡಿದೆ.
ನೀವೂ ನೀಡಿರುವ ನಿವೃತ್ತಿ ಹಿಂಪಡೆದು, ರಾಜ್ಯ ತಂಡದ ಆಟಗಾರ ಹಾಗೂ ಮೆಂಟರ್ ಆಗಿ ಸೇವೆ ಸಲ್ಲಿಸುವಂತೆ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಅವರ ಬಳಿ ಮನವಿ ಮಾಡಿಕೊಂಡಿದೆ. ಆದರೆ ಇದಕ್ಕೆ ಯುವರಾಜ್ ಸಿಂಗ್ ಇಲ್ಲಿಯವರೆಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಕಳೆದ ವರ್ಷ ನಿವೃತ್ತಿ ಪಡೆದುಕೊಂಡಿರುವ ಸಿಕ್ಸರ್ ಕಿಂಗ್, ಈಗಾಗಲೇ ಶುಬ್ಮನ್ ಗಿಲ್ ಸೇರಿದಂತೆ ಕೆಲ ಆಟಗಾರರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಹೀಗಾಗಿ ಪಿಸಿಎ ಕಾರ್ಯದರ್ಶಿ ಪುನೀತ್ ಬಾಲಿ ಈ ವಿನಂತಿ ಮಾಡಿಕೊಂಡಿದ್ದಾರೆ.