ಮೆಲ್ಬೋರ್ನ್: ಭಾರತ ತಂಡದ ಪ್ರಧಾನ ಟೆಸ್ಟ್ ಸ್ಪಿನ್ನರ್ ಆಗಿರುವ ಆರ್ ಅಶ್ವಿನ್ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಮುರುಳೀದರನ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಬ್ರೇಕ್ ಮಾಡಿದ್ದಾರೆ.
ಭಾರತದ ಪರ ಗರಿಷ್ಠ ವಿಕೆಟ್ ಪಡೆದವರ ಪಟ್ಟಿಯಲ್ಲಿ ಆರ್. ಅಶ್ವಿನ್ 4ನೇ ಸ್ಥಾನದಲ್ಲಿದ್ದಾರೆ. 619 ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ ಅಗ್ರಸ್ಥಾನದಲ್ಲಿದ್ದರೆ, ಕಪಿಲ್ ದೇವ್(434), ಹರ್ಭಜನ್ ಸಿಂಗ್(417) ನಂತರ 375 ವಿಕೆಟ್‌ಗಳನ್ನು ಪಡೆದಿರುವ ಅಶ್ವಿನ್ 4ನೇ ಸ್ಥಾನದಲ್ಲಿದ್ದಾರೆ.
ಆದರೆ, 2ನೇ ಟೆಸ್ಟ್ನ 2ನೇ ಇನ್ನಿಂಗ್ಸ್ನಲ್ಲಿ ಆಸೀಸ್ ಕೊನೆಯ ಬ್ಯಾಟ್ಸ್ಮನ್ ಹೇಜಲ್ವುಡ್ರನ್ನು ಬೌಲ್ಡ್ ಮಾಡುವ ಮೂಲಕ ತಮಿಳುನಾಡಿನ ಸ್ಪಿನ್ನರ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೆಚ್ಚು 192ನೇ ಎಡಗೈ ಬ್ಯಾಟ್ಸ್ಮನ್ರನ್ನು ಔಟ್ ಮಾಡಿದ ದಾಖಲೆ ನಿರ್ಮಿಸಿದರು.