ಮುಂಬೈ:ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ವೇಳೆ ಹೆಬ್ಬೆರಳು ಮುರಿತಕ್ಕೆ ಒಳಗಾಗಿದ್ದ ಭಾರತ ತಂಡದ ಆಲ್‌ರೌಂಡರ್ ರವೀಂದ್ರ ಜಡೇಜಾ ಇಂಗ್ಲೆಂಡ್ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಿಂದಲೂ ಹೊರಬಿದ್ದಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಫೆಬ್ರವರಿ 5 ರಂದು ಎಂ.ಚಿದಂಬರಂ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಸರಣಿಯ ಮೊದಲ ಎರಡೂ ಪಂದ್ಯಗಳೂ ಇಲ್ಲೇ ನಡೆಯಲಿವೆ.
ಮೂರನೇ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡುವ ವೇಳೆ ಜಡೇಜಾ ಕೈಬೆರಳಿಗೆ ಚೆಂಡು ಬಡಿದು ಮುರಿದಿತ್ತು. ಈ ಕಾರಣದಿಂದ ಅವರು ಗಬ್ಬಾದಲ್ಲಿ ನಡೆದಿದ್ದ ನಾಲ್ಕನೇ ಟೆಸ್ಟ್ನಿಂದ ಹೊರಬಿದ್ದಿದ್ದರು. ನಂತರ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಸರಣಿಗೆ ಪ್ರಕಟಿಸಿದ ತಂಡದಿದಲ್ಲೂ ಜಡೇಜಾ ಹೆಸರು ಇರಲಿಲ್ಲ. ಇದೀಗ ಸಂಪೂರ್ಣ ಟೆಸ್ಟ್ ಸರಣಿಯಿಂದ ಹೊರಬಿದ್ದಿರುವುದು ಭಾರತ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ.