ನವದೆಹಲಿ:ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಗಾಯಕ್ಕೊಳಗಾಗಿದ್ದ ಭಾರತೀಯ ಆಲ್ರೌಂಡರ್ ರವೀಂದ್ರ ಗಾಯದಿಂದ ಚೇತರಿಸಿಕೊಳ್ಳದ ಕಾರಣ ಪ್ರಸ್ತುತ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 4 ಪಂದ್ಯಗಳ ಟೆಸ್ಟ್ ಸರಣಿಯಿಂದಲೂ ಹೊರಬಿದ್ದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ವೇಳೆ ಪ್ಯಾಟ್ ಕಮ್ಮಿನ್ಸ್ ಬೌಲಿಂಗ್ನಲ್ಲಿ ಚೆಂಡು ಎಡಗೈ ಹೆಬ್ಬರಳಿಗೆ ಬಿದ್ದು ಮುರಿದಿತ್ತು. ನಂತರ ಆಸ್ಟ್ರೇಲಿಯಾದಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಜಡೇಜಾ 6 ವಾರಗಳ ವಿಶ್ರಾಂತಿಗೆ ಒಳಗಾಗಿದ್ದರು. ಈ ಕಾರಣದಿಂದ ಇಂಗ್ಲೆಂಡ್ ವಿರುದ್ಧ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಅವರನ್ನು ಆಯ್ಕೆ ಮಾಡಿರಲಿಲ್ಲ.