ನವದೆಹಲಿ:ಟೀಂ ಇಂಡಿಯಾ ಮಾಜಿ ಆಟಗಾರ ಯುವರಾಜ್ ಸಿಂಗ್ ಯುವ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ಬೆಂಬಲಕ್ಕೆ ನಿಂತಿದ್ದಾರೆ. ಪಂತ್ ಮೇಲೆ ಒತ್ತಡ ಹೇರಬಾರದು. ಸಹಜ ಶೈಲಿಯಲ್ಲೇ ಬ್ಯಾಟಿಂಗ್ ಮಾಡಲು ಅವಕಾಶ ನೀಡಿ ಎಂದು ಯುವಿ ಹೇಳಿದ್ದಾರೆ.
ಇತ್ತೀಚೆಗೆ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿರುವ ರಿಷಬ್ ಪ್ರದರ್ಶನದ ಬಗ್ಗೆ ಎಲ್ಲೆಡೆಯಿಂದ ಟೀಕೆ ವ್ಯಕ್ತವಾಗುತ್ತಿದೆ. ಮುಂದಿನ ವರ್ಷ ಟಿ-20 ವಿಶ್ವಕಪ್ ಟೂರ್ನಿ ಕೂಡ ಇರುವುದರಿಂದ, nಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಬದಲಿಗೆ ಪಂತ್ಗೆ ಹೆಚ್ಚಿನ ಅವಕಾಶ ನೀಡಲಾಗುತ್ತಿದೆ. ಆದರೆ, ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ಪಂತ್ ವಿಫಲರಾಗುತ್ತಿದ್ದಾರೆ ಎಂಬ ಮಾತು ಕೇಳಿಬಂದಿದ್ದವು.