ಮುಂಬೈ:ವಿಶ್ವದಾದ್ಯಂತ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ವಿವಿಧ ಕ್ರಿಕೆಟ್ ಆಡುವ ರಾಷ್ಟ್ರಗಳ ಆಟಗಾರರು ಸೇರಿ ನಡೆಸುತ್ತಿರುವ ರೋಡ್ ಸೇಫ್ಟಿ ಟಿ20 ಸರಣಿಯ ಮೊದಲ ಪಂದ್ಯ ನಾಳೆ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯಲಿದೆ.
ಐದು ತಂಡಗಳ ಟಿ-20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಲೆಜೆಂಡ್ಸ್ ಮತ್ತು ವೆಸ್ಟ್ ಇಂಡೀಸ್ ಲೆಜೆಂಡ್ಸ್ ತಂಡ ಮುಖಾಮುಖಿಯಾಗುತ್ತಿವೆ. ಕ್ರಿಕೆಟ್ನಿಂದ ನಿವೃತ್ತಿ ಹೊಂದಿರುವ ಹಲವಾರು ಲೆಜೆಂಡ್ ಆಟಗಾರರು ನಾಳೆ ಮೈದಾನಕ್ಕಿಳಿದು ಮತ್ತೆ ಬ್ಯಾಟಿಂಗ್ ಮತ್ತು ಬೌಲಿಂಗ್ ಪ್ರದರ್ಶಿಸಲಿದ್ದಾರೆ.
ರಸ್ತೆ ಅಪಘಾತ ಸುರಕ್ಷತೆ ಬಗ್ಗೆ ಅರಿವು ಮೂಡಿಸಲು ವಿಶ್ವದ ಪ್ರಸಿದ್ಧ ಮಾಜಿ ಕ್ರಿಕೆಟಿರಾದ ರಿಕಿ ಪಾಂಟಿಂಗ್, ಬ್ರಿಯಾನ್ ಲಾರ, ಜಾಂಟಿ ರೋಡ್ಸ್ , ಬ್ರೆಟ್ ಲೀ, ತಿಲಕರತ್ನೆ ದಿಲ್ಶನ್ ಸೇರಿದಂತೆ ಶ್ರೀಲಂಕಾ, ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್, ದಕ್ಷಿಣ ಆಫ್ರಿಕಾ ಹಾಗೂ ಭಾರತ ತಂಡದ ಲೆಜೆಂಡರಿ ಕ್ರಿಕೆಟಿಗರು ಈ ಟೂರ್ನಿಯಲ್ಲಿ ಭಾಗವಹಿಸಲಿದ್ದಾರೆ.