ನಾಗ್ಪುರ್ (ಮಹಾರಾಷ್ಟ್ರ): ಭಾರತ ತಂಡ ಇಂದು ನಾಗ್ಪುರದಲ್ಲಿ ಬಾಂಗ್ಲಾದೇಶ ವಿರುದ್ಧ ಅಂತಿಮ ಟಿ20 ಪಂದ್ಯವಾಡಲಿದ್ದು, ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಕೇವಲ 2 ಸಿಕ್ಸರ್ ಸಿಡಿಸಿದರೆ ಭಾರತದ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 400 ಸಿಕ್ಸರ್ ಸಿಡಿಸಿದ ಏಕೈಕ ಹಾಗೂ ಮೊದಲ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
2 ಸಿಕ್ಸರ್ ಸಿಡಿಸಿದರೆ ಗೇಲ್, ಅಫ್ರಿದಿ ಜೊತೆ ವಿಶ್ವದಾಖಲೆ ಹಂಚಿಕೊಳ್ಳಲಿದ್ದಾರೆ ಹಿಟ್ಮ್ಯಾನ್! - ಕ್ರಿಸ್ ಗೇಲ್ ಶಾಹಿದ್ ಅಫ್ರಿದಿ ಸಾಲಿಗೆ ರೋಹಿತ್
ಮೂರು ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 398 ಸಿಕ್ಸರ್ ಸಿಡಿಸಿರುವ ರೋಹಿತ್ ಇನ್ನೆರೆಡು ಸಿಕ್ಸರ್ ಸಿಡಿಸಿದರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 400 ಸಿಕ್ಸರ್ ಸಿಡಿಸಿದ ಭಾರತದ ಮೊದಲ ಹಾಗೂ ವಿಶ್ವದ 3ನೇ ಕ್ರಿಕೆಟಿಗ ಎನಿಸಿಕೊಳ್ಳಲಿದ್ದಾರೆ.
ಕಳೆದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದ ನಾಯಕ ರೋಹಿತ್ ಶರ್ಮಾ ಕೇವಲ 43 ಎಸೆತಗಳಿಗೆ 85 ರನ್ ಚಚ್ಚಿದ್ದರು. ಅಲ್ಲದೆ 6 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್ ಸಿಡಿಸಿದ್ದರು. ಈ ಪಂದ್ಯದಲ್ಲಿ ಭಾರತ 8 ವಿಕೆಟ್ ಗೆಲುವು ಸಾಧಿಸಿ ಸರಣಿಯನ್ನು 1-1ರಲ್ಲಿ ಸಮಬಲ ಸಾಧಿಸುವಂತೆ ಮಾಡಿದ್ದರು.
ಮೂರು ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 398 ಸಿಕ್ಸರ್ ಸಿಡಿಸಿರುವ ರೋಹಿತ್ ಇನ್ನೆರೆಡು ಸಿಕ್ಸರ್ ಸಿಡಿಸಿದರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 400 ಸಿಕ್ಸರ್ ಸಿಡಿಸಿದ ಭಾರತದ ಮೊದಲ ಹಾಗೂ ವಿಶ್ವದ 3ನೇ ಕ್ರಿಕೆಟಿಗ ಎನಿಸಿಕೊಳ್ಳಲಿದ್ದಾರೆ. ಈಗಾಗಲೇ ವಿಂಡೀಸ್ ದಿಗ್ಗಜ ಕ್ರಿಸ್ ಗೇಲ್ 534 ಹಾಗೂ ಪಾಕಿಸ್ತಾನದ ಶಾಹಿದ್ ಅಫ್ರಿದಿ 476 ಸಿಕ್ಸರ್ಗಳೊಂದಿಗೆ ಮೊದಲೆರಡು ಸ್ಥಾನದಲ್ಲಿದ್ದಾರೆ.
ರೋಹಿತ್ ಏಕದಿನ ಪಂದ್ಯದಲ್ಲಿ 232 ಸಿಕ್ಸ್‌ಗಳು, ಟೆಸ್ಟ್‌ನಲ್ಲಿ 51 ಸಿಕ್ಸ್‌ಗಳು ಮತ್ತು ಟಿ20 ಕ್ರಿಕೆಟ್‌ನಲ್ಲಿ 115 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.