ಅಹಮದಾಬಾದ್: ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಮತ್ತೊಂದು ದಾಖಲೆ ನಿರ್ಮಾಣ ಮಾಡಿದ್ದು, ಈ ಮೂಲಕ ನ್ಯೂಜಿಲ್ಯಾಂಡ್ ಪ್ಲೇಯರ್ ಗಪ್ಟಿಲ್ ರೆಕಾರ್ಡ್ ಬ್ರೇಕ್ ಮಾಡಿದ್ದಾರೆ.
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಕೇವಲ 34 ಎಸೆತಗಳಲ್ಲಿ 64 ರನ್ ಗಳಿಸಿರುವ ರೋಹಿತ್ ಶರ್ಮಾ ಟಿ-20 ಕ್ರಿಕೆಟ್ನಲ್ಲಿ ಮಾರ್ಟಿನ್ ಗಪ್ಟಿಲ್ ರೆಕಾರ್ಡ್ ಬ್ರೇಕ್ ಮಾಡಿದ್ದು, ಇದೀಗ ಚುಟುಕು ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಎರಡನೇ ಪ್ಲೇಯರ್ ಆಗಿದ್ದಾರೆ.
ಟಿ-20 ಕ್ರಿಕೆಟ್ನಲ್ಲಿ ರೋಹಿತ್ ಶರ್ಮಾ 26ನೇ ಅರ್ಧಶತಕ ಸಿಡಿಸಿದ್ದು, ಜತೆಗೆ 111 ಪಂದ್ಯಗಳಿಂದ 2,864 ರನ್ ಗಳಿಸಿದ್ದಾರೆ. ಈಗಾಗಲೇ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಟಿ-20 ಕ್ರಿಕೆಟ್ನಲ್ಲಿ 3 ಸಾವಿರಕ್ಕಿಂತಲೂ ಅಧಿಕ ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದಾರೆ.
ಇದನ್ನೂ ಓದಿ: ಟಿ20 ಕ್ರಿಕೆಟ್ನಲ್ಲಿ 9 ಸಾವಿರ ರನ್ ಪೂರೈಸಿದ ರೋಹಿತ್ ಶರ್ಮಾ
ಉಳಿದಂತೆ ಗಪ್ಟಿಲ್ 2,839 ರನ್ ಗಳಿಸಿ ಮೂರನೇ ಸ್ಥಾನ ಹಾಗೂ ಫಿಂಚ್ 2,346 ರನ್ ಗಳಿಸಿ 4ನೇ ಸ್ಥಾನದಲ್ಲಿದ್ದಾರೆ. ಇದರ ಜತೆಗೆ ರೋಹಿತ್ ಶರ್ಮಾ ಟಿ-20 ಕ್ರಿಕೆಟ್ನಲ್ಲಿ 9000+ ರನ್ ಪೂರೈಸಿದ ಭಾರತದ 2ನೇ ಹಾಗೂ ವಿಶ್ವದ 9ನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.