ರಾಜ್ಕೋಟ್:ಭಾರತ ತಂಡದ ಪ್ರಭಾರಿ ನಾಯಕ ರೋಹಿತ್ ಶರ್ಮಾ ಬಾಂಗ್ಲಾದೇಶ ವಿರುದ್ಧದ 2ನೇ ಟಿ20 ಪಂದ್ಯದ ವೇಳೆ ಟಿ20 ಕ್ರಿಕೆಟ್ನಲ್ಲಿ 100 ಪಂದ್ಯ ಪೂರೈಸಿದ ಭಾರತದ ಮೊದಲ ಆಟಗಾರ ಎನಿಸಿಕೊಳ್ಳಲಿದ್ದಾರೆ.
2007ರ ಟಿ20 ವಿಶ್ವಕಪ್ನಲ್ಲಿ ಇಂಗ್ಲೆಂಡ್ ವಿರುದ್ಧ ಪಾದಾರ್ಪಣೆ ಮಾಡಿದ ರೋಹಿತ್ ಶರ್ಮಾ 12 ವರ್ಷಗಳಲ್ಲಿ 100ನೇ ಟಿ20 ಪಂದ್ಯದ ಹೊಸ್ತಿಲಲ್ಲಿದ್ದಾರೆ. ಕೊಹ್ಲಿ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ ಪಾಲಿಗೆ ಇಂದು ಅತ್ಯಂತ ಅವಿಸ್ಮರಣೀಯ ದಿನವಾಗಿದೆ. ಈ ಕುರಿತು ತಮ್ಮ 12 ವರ್ಷಗಳ ಕ್ರಿಕೆಟ್ ವೃತ್ತಿ ಜೀವನದ ಹಲವು ಸಂಗತಿಗಳನ್ನು ಬಿಸಿಸಿಐ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಹಿಟ್ಮ್ಯಾನ್ ಹಂಚಿಕೊಂಡಿದ್ದಾರೆ.
ಭಾರತದ ಪರ 100 ನೇ ಟಿ20 ಆಡುತ್ತಿರುವುದು ಹೆಮ್ಮೆಯ ಸಂಗತಿ. ನನ್ನ ವೃತ್ತಿ ಜೀವನದಲ್ಲಿ ಹಲವು ಏಳು-ಬೀಳುಗಳನ್ನ ಕಂಡಿದ್ದೇನೆ. ಆದ್ರೆ ಎಲ್ಲಾ ಸಂದರ್ಭದಲ್ಲಿ ನನ್ನನ್ನು ಬೆಂಬಲಿಸಿದ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ.