ದುಬೈ: ಟೀಂ ಇಂಡಿಯಾ ಆರಂಭಿಕ ಆಟಗಾರ ರೋಹಿತ್ ಶರ್ಮಾ ಸದ್ಯ ದುಬೈನಲ್ಲಿದ್ದು, ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಭಾಗಿಯಾಗಲು ಸಜ್ಜಾಗುತ್ತಿದ್ದಾರೆ. ಇದರ ಮಧ್ಯೆ ಪತ್ನಿ ರಿತಿಕಾ ಜತೆ ವರ್ಕೌಟ್ ಮಾಡುತ್ತಿರುವ ವಿಡಿಯೋ ಶೇರ್ ಮಾಡಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡದ ಕ್ಯಾಪ್ಟನ್ ಆಗಿರುವ ರೋಹಿತ್ ಶರ್ಮಾ ಉದ್ಘಾಟನಾ ಪಂದ್ಯದಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸವಾಲು ಎದುರಿಸುವ ಸಾಧ್ಯತೆ ಇದೆ. ಇದೀಗ ಸಾಮಾಜಿಕ ಅಂತರ ಕಡ್ಡಾಯವಾಗಿರುವ ಕಾರಣ ತಮಗೆ ನೀಡಿರುವ ಹೋಟೆಲ್ ರೂಂ ವೊಂದರಲ್ಲಿ ವರ್ಕೌಟ್ ನಡೆಸಿದ್ದಾರೆ.