ನವದೆಹಲಿ: ಮಂಡಿರಜ್ಜು ಗಾಯಕ್ಕೆ ತುತ್ತಾಗಿರುವ ಭಾರತ ಟೆಸ್ಟ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ವೃದ್ಧಿಮಾನ್ ಸಹಾ ಅವರು ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಗೆ ಲಭ್ಯವಾಗುವುದು ಅನುಮಾನ ಎನ್ನಲಾಗುತ್ತಿದೆ.
ಎಂಎಸ್ ಧೋನಿ ನಂತರ ಟೆಸ್ಟ್ ತಂಡದ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸುತ್ತಿರುವ ಸಹಾ, ನಂತರ ಪಂತ್ ಜೊತೆಗೆ ಪ್ರತಿಸ್ಪರ್ಧಿಯಾಗಿ ಪೈಪೋಟಿ ನಡೆಸುತ್ತಿದ್ದಾರೆ. ಐಪಿಎಲ್ನಲ್ಲೂ ಆರಂಭಿಕನಾಗಿ ಯಶಸ್ಸು ಸಾಧಿಸಿದ್ದ ಸಹಾ ಮುಂಬೈ ಇಂಡಿಯನ್ಸ್ ಪಂದ್ಯದ ವೇಳೆ ಸ್ನಾಯುಸೆಳೆತಕ್ಕೆ ಒಳಗಾಗಿದ್ದರು. ಹಾಗಾಗಿ ಆರ್ಸಿಬಿ ಮತ್ತು ಡೆಲ್ಲಿ ವಿರುದ್ಧದ ಪ್ಲೇ ಆಫ್ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ.