ರಾಂಚಿ:ಭಾರತಕ್ಕೆ ಎರಡು ವಿಶ್ವಕಪ್ ಕ್ರಿಕೆಟ್ ಗೆದ್ದುಕೊಟ್ಟ ಮಾಜಿ ನಾಯಕ ಎಂ.ಎಸ್ ಧೋನಿ ಅವರ ಮನೆಗೆ ಸುಮಾರು 5 ಗಂಟೆಗಳ ಕಾಲ ವಿದ್ಯುತ್ ಕಡಿತಗೊಂಡ ಘಟನೆ ನಡೆದಿದೆ.
ಜಾರ್ಖಂಡ್ ಜನರಿಗೆ ವಿದ್ಯುತ್ ವ್ಯತ್ಯಯ ಸಮಸ್ಯೆ; ಧೋನಿ ಮನೆಗೂ ತಟ್ಟಿದ ಪವರ್ ಕಟ್ ಬಿಸಿ - MS Dhoni
ವಿದ್ಯುತ್ ಕಡಿತದ ಬಗ್ಗೆ ಧೋನಿ ಪತ್ನಿ ಸಾಕ್ಷಿ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರ್ಕಾರದ ನಡೆಯನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.
ಗುರುವಾರ ಏಕಾಏಕಿ ವಿದ್ಯುತ್ ಕಡಿತದ ಬಗ್ಗೆ ಧೋನಿ ಪತ್ನಿ ಸಾಕ್ಷಿ ಅವರು ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರ್ಕಾರದ ನಡೆಯನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ. ಬಹುತೇಕ ನೆಟ್ಟಿಗರು ಸಾಕ್ಷಿ ಅವರಿಗೆ ಬೆಂಬಲ ಸೂಚಿಸಿದ್ದು, ಈ ಟ್ವೀಟ್ ಅನ್ನು ಜಾರ್ಖಂಡ್ ಮುಖ್ಯಮಂತ್ರಿ ಅವರಿಗೆ ಟ್ಯಾಗ್ ಮಾಡಿದ್ದಾರೆ.
'ಜಾರ್ಖಂಡ್ನ ಜನರು ನಿತ್ಯ ವಿದ್ಯುತ್ ಕಡಿತದ ಸಮಸ್ಯೆ ಎದುರಿಸುತ್ತಿದ್ದಾರೆ. ಪ್ರತಿ ದಿನ ಸುಮಾರು 4ರಿಂದ 7 ಗಂಟೆಯವರೆಗೂ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದೆ. ಸೆಪ್ಟೆಂಬರ್ 19ರಂದು ಐದು ಗಂಟೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಾರೆ ಎಂಬ ಭರವಸೆ ಇದೆ' ಎಂದು ಬರೆದುಕೊಂಡಿದ್ದಾರೆ.