ಹೈದರಾಬಾದ್: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅಜರುದ್ದೀನ್ ಮಗ ಹಾಗೂ ಭಾರತ ಟೆನ್ನಿಸ್ ಸ್ಟಾರ್ ಸಾನಿಯ ಮಿರ್ಜಾ ಅವರ ತಂಗಿ ವಿವಾಹ ಬಂಧನಕ್ಕೆ ಕಾಲಿಡುತ್ತಿದ್ದಾರೆ.
ಸಾನಿಯಾ ಮಿರ್ಜಾ ಅವರ ತಂಗಿ ಅನಮ್ ಮಿರ್ಜಾ ಹಾಗೂ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಮಗ ಅಸದ್ ಅಜರುದ್ಧೀನ್ ಈ ವರ್ಷದ ಡಿಸೆಂಬರ್ನಲ್ಲಿ ಸಪ್ತಪದಿ ತುಳಿಯಲಿದ್ದಾರೆ ಎಂದು ಖಾಸಗಿ ಮಾಧ್ಯಮಕ್ಕೆ ನೀಡಿರುವ ಸಂದರ್ಶನವೊಂದರಲ್ಲಿ ಸಾನಿಯಾ ಮಿರ್ಜಾ ತಿಳಿಸಿದ್ದಾರೆ.