ನವದೆಹಲಿ: ಮಹೇಂದ್ರ ಸಿಂಗ್ ಧೋನಿ ಭಾರತದ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರು ಎಂದು ಟೀಂ ಇಂಡಿಯಾದ ಉಪನಾಯಕ, ಹಿಟ್ ಮ್ಯಾನ್ ರೋಹಿತ್ ಶರ್ಮ ಟ್ವೀಟ್ ಮಾಡಿದ್ದಾರೆ.
ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ರೋಹಿತ್, ಕ್ರಿಕೆಟ್ನಲ್ಲಿ ಮಹೇಂದ್ರ ಸಿಂಗ್ ಧೋನಿ ಅವರ ಪ್ರಭಾವ ಹೆಚ್ಚಿನ ಪ್ರಮಾಣದಲ್ಲಿತ್ತು. ಒಂದು ತಂಡವನ್ನು ಕಟ್ಟುವುದು ಹೇಗೆ?, ಅದನ್ನು ನಿರ್ವಹಿಸುವುದು ಹೇಗೆ? ಎಂಬುದನ್ನು ಅವರು ಚೆನ್ನಾಗಿ ತಿಳಿದುಕೊಂಡಿದ್ದರು ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.