ಮೊಹಾಲಿ: ಪಾಕಿಸ್ತಾನದ ಮಾಜಿ ನಾಯಕ ಶಾಹೀದ್ ಅಫ್ರಿದಿ ಭಾರತ ತಂಡದ ನಾಯಕ ಕೊಹ್ಲಿಯನ್ನು ವಿಶ್ವದ ಅತ್ಯುತ್ತಮ ಆಟಗಾರ ಎಂದು ಹಾಡಿ ಹೊಗಳಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಔಟಾಗದೇ 72 ರನ್ಗಳಿಸುವ ಮೂಲಕ ಭಾರತ ತಂಡಕ್ಕೆ 7 ವಿಕೆಟ್ಗಳ ಭರ್ಜರಿ ಜಯ ತಂದುಕೊಟ್ಟಿದ್ದರು. ಈ ಇನ್ನಿಂಗ್ಸ್ನಲ್ಲಿ ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ಕೊಹ್ಲಿ ಟಿ-20 ಕ್ರಿಕೆಟ್ನಲ್ಲಿ 50 ರ ಬ್ಯಾಟಿಂಗ್ ಸರಾಸರಿ ಕಾಯ್ದುಕೊಂಡಿದ್ದರು. ಈ ಮೂಲಕ ಎಲ್ಲ ಮಾದರಿಯ ಕ್ರಿಕೆಟ್ನಲ್ಲೂ 50ರ ಬ್ಯಾಟಿಂಗ್ ಸರಾಸರಿ ಹೊಂದಿರುವ ವಿಶ್ವದ ಏಕೈಕ ಆಟಗಾರ ಎಂಬ ಕೀರ್ತಿಗೆ ಭಾಜನರಾದರು.
ಕೊಹ್ಲಿ ಎಲ್ಲ ಮಾರದರಿಯ ಕ್ರಿಕೆಟ್ನಲ್ಲೂ 50ರ ಬ್ಯಾಟಿಂಗ್ ಸರಾಸರಿ ತಲುಪಿದ ವಿಚಾರವನ್ನು ಐಸಿಸಿ ತನ್ನ ಟ್ವಿಟರ್ ಖಾತೆಯಲ್ಲಿ ತಿಳಿಸಿದ್ದು, ಈ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಅಫ್ರಿದಿ. ಕೊಹ್ಲಿಗೆ ಶುಭಾಶಯ ಕೋರಿದ್ದು, ನೀವೊಬ್ಬ ಉತ್ತಮ ಆಟಗಾರ, ನಿಮ್ಮ ಯಶಸ್ಸು ಹೀಗೆ ಮುಂದುವರಿಯಲಿ ಎಂದು ಆಶಿಸುತ್ತೇನೆ, ವಿಶ್ವದ ಕ್ರಿಕೆಟ್ ಅಭಿಮಾನಿಗಳನ್ನು ಹೀಗೆ ಮನರಂಜಿಸಿ ಎಂದು ಟ್ವೀಟ್ ಮೂಲಕ ಕೊಹ್ಲಿಗೆ ಶುಭಾಶಯ ಕೋರಿ ಟ್ವೀಟ್ ಮಾಡಿದ್ದಾರೆ.
ಇದೇ ಪಂದ್ಯದಲ್ಲಿ ಕೊಹ್ಲಿ(2441) ಭಾರತದವರೇ ಆದ ರೋಹಿತ್ ಶರ್ಮಾ(2434)ರನ್ನು ಹಿಂದಿಕ್ಕಿ ಟಿ-20 ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ಗಳಿಸಿದ ಬ್ಯಾಟ್ಸ್ಮನ್ ಎಂಬ ಖ್ಯಾತಿಗೆ ಪಾತ್ರರಾದರು.