ಇಸ್ಲಾಮಾಬಾದ್:ಮಹಾಮಾರಿ ಕೊರೊನಾ ವೈರಸ್ ಪಕ್ಕದ ರಾಷ್ಟ್ರ ಪಾಕಿಸ್ತಾನದಲ್ಲಿ ರೌದ್ರನರ್ತನ ಹೊರಹಾಕುತ್ತಿದ್ದು, ಇಷ್ಟಾದರೂ ಯಾವುದೇ ಹೇಳಿಕೊಳ್ಳುವಂತಹ ಕ್ರಮ ಕೈಗೊಳ್ಳಲು ಇಮ್ರಾನ್ ಸರ್ಕಾರ ಮುಂದಾಗಿಲ್ಲ. ಇದರ ಮಧ್ಯೆ ಕ್ರಿಕೆಟರ್ ಮಾಡುತ್ತಿರುವ ಕೆಲಸ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.
ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಆಟಗಾರ ಶಾಹಿದ್ ಅಫ್ರಿದಿ, ಅಲ್ಲಿನ ಜನರಿಗೆ ಅಗತ್ಯ ವಸ್ತು ನೀಡುವ ಕೆಲಸ ಮಾಡುತ್ತಿದ್ದು, ಇದೇ ವಿಷಯವನ್ನಿಟ್ಟುಕೊಂಡು ಹರ್ಭಜನ್ ಸಿಂಗ್ ಅವರ ಬೆನ್ನು ತಟ್ಟುವ ಕೆಲಸ ಮಾಡಿದ್ದರು. ಮಾನವೀಯತೆಗಾಗಿ ಉತ್ತಮ ಕೆಲಸ ಮಾಡುತ್ತಿದ್ದೀರಿ. ದೇವರು ನಿಮ್ಮೆಲ್ಲರನ್ನೂ ಆಶೀರ್ವದಿಸಲಿ... ನಿಮಗೆ ಹೆಚ್ಚಿನ ಶಕ್ತಿ ನೀಡಲಿ ಎಂದು ಹೇಳಿದ್ದರು.