ದುಬೈ:ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್ ಐಪಿಎಲ್ನಲ್ಲಿ 5000 ರನ್ ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ 5ನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
ಪಂಜಾಬ್ ವಿರುದ್ಧದ ಪಂದ್ಯದಲ್ಲಿ ರವಿ ಬಿಷ್ಣೋಯ್ ಅವರ ಓವರ್ನಲ್ಲಿ ಸಿಕ್ಸರ್ ಸಿಡಿಸುತ್ತಿದ್ದಂತೆ ಐಪಿಎಲ್ನಲ್ಲಿ 5000 ರನ್ಸ್ ಗಡಿದಾಟಿದರು. ಈ ಪಂದ್ಯಕ್ಕೂ ಮುನ್ನ ಅವರು 4,938 ರನ್ಗಳಿಸಿದ್ದರು.
ಶಿಖರ್ ಧವನ್ಗೂ ಮೊದಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ (5,759), ಸುರೇಶ್ ರೈನಾ(5,368), ರೋಹಿತ್ ಶರ್ಮಾ(5,158) ಹಾಗೂ ಡೇವಿಡ್ ವಾರ್ನರ್(5,037)ಐಪಿಎಲ್ನಲ್ಲಿ 5000 ರನ್ಗಡಿದಾಟಿದ ಬ್ಯಾಟ್ಸ್ಮನ್ ಆಗಿದ್ದಾರೆ.
ಧವನ್ 5000 ರನ್ ಗಡಿದಾಟಿದ್ದಲ್ಲೆ ವೇಗವಾಗಿ ಈ ಸಾಧನೆ ಮಾಡಿದ 3ನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಡೇವಿಡ್ ವಾರ್ನರ್ 135 ಇನ್ನಿಂಗ್ಸ್ಗಳಲ್ಲಿ ಈ ಸಾಧನೆ ಮಾಡಿದ್ದರೆ, ಕೊಹ್ಲಿ 157, ಧವನ್ 168, ರೈನಾ 173 ಹಾಗೂ ರೋಹಿತ್ ಶರ್ಮಾ 187 ಇನ್ನಿಂಗ್ಸ್ ತೆಗೆದುಕೊಂಡಿದ್ದಾರೆ.