ನವದೆಹಲಿ: ಸೆಪ್ಟೆಂಬರ್ 19ರಿಂದ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಗೊಳ್ಳಲಿದೆ. ಈ ಟೂರ್ನಿಗಾಗಿ ಈಗಿನಿಂದಲೇ ಎಲ್ಲ ಆಟಗಾರರು ತಯಾರಾಗುತ್ತಿದ್ದಾರೆ. ಟೀಂ ಇಂಡಿಯಾದ ಆರಂಭಿಕ ದಾಂಡಿಗ ಶಿಖರ್ ಧವನ್ ಮೈದಾನಕ್ಕಿಳಿದು ನೆಟ್ ಪ್ರಾಕ್ಟಿಸ್ ಶುರು ಮಾಡಿದ್ದಾರೆ.
ಲಾಕ್ಡೌನ್ ಹಾಗೂ ಕೊರೊನಾ ವೈರಸ್ ಸೋಂಕು ಹರಡುವ ಭೀತಿಯ ಕಾರಣದಿಂದ ಮನೆಯಲ್ಲಿಯೇ ಧವನ್ ಸಮಯ ಕಳೆದಿದ್ದರು. ಆದರೀಗ ದುಬೈನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ನಡೆಸಲು ಬಿಸಿಸಿಐ ಮುಂದಾಗುತ್ತಿದ್ದಂತೆ ಅವರು ಮೈದಾನದಲ್ಲಿ ಅಭ್ಯಾಸ ಆರಂಭಿಸಿದ್ದಾರೆ.
ಎಡಗೈ ಬ್ಯಾಟ್ಸ್ಮನ್ ಶಿಖರ್ ಧವನ್ ಈ ಕುರಿತ ವಿಡಿಯೊವನ್ನು ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಅಭ್ಯಾಸದ ವೇಳೆ ಲೀಲಾಜಾಲವಾಗಿ ಬ್ಯಾಟ್ ಬೀಸಿರುವ ಅವರು, ಭಾರತದ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಅಬ್ಬರಿಸುವ ಮುನ್ಸೂಚನೆ ನೀಡಿದ್ದಾರೆ.