ಹೈದರಾಬಾದ್: ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದ ವೇಳೆ ಭುಜದ ನೋವಿಗೊಳಗಾದ ಟೀಂ ಇಂಡಿಯಾ ಯುವ ಆಟಗಾರ ಶ್ರೇಯಸ್ ಅಯ್ಯರ್ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.
ಏಪ್ರಿಲ್ 8ರಂದು ಭುಜದ ಶಸ್ತ್ರಚಿಕಿತ್ಸೆ ಬಳಿಕ, ಮುಂದಿನ ನಾಲ್ಕು ತಿಂಗಳ ಕಾಲ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ನಿಂದ ಹೊರಗುಳಿದಿದ್ದು, ಅವರ ಜಾಗಕ್ಕೆ ರಿಷಭ್ ಪಂತ್ ಡೆಲ್ಲಿ ತಂಡದ ಕ್ಯಾಪ್ಟನ್ ಆಗಿ ಆಯ್ಕೆಯಾಗಿದ್ದಾರೆ.