ಲಿಂಕಾನ್:ಭಾರತ ತಂಡಕ್ಕೆ ಆಯ್ಕೆಯಾದ ಬೆನ್ನಲ್ಲೇ ನ್ಯೂಜಿಲ್ಯಾಂಡ್ ಎ ವಿರುದ್ಧ ಆಕರ್ಷಕ ದ್ವಿಶತಕ ಸಿಡಿಸಿ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದ ಯುವ ಆಟಗಾರ ಇದೀಗ ಎರಡನೇ ಅನಧಿಕೃತ ಟೆಸ್ಟ್ನಲ್ಲೂ ಶತಕ ದಾಖಲಿಸಿ ಸಂಭ್ರಮಿಸಿದ್ದಾರೆ.
ಆರಂಭಿಕನಾಗಿ ಕಣಕ್ಕಿಳಿದ ಶುಬ್ಮನ್ ಗಿಲ್ 153 ಎಸೆತಗಳಲ್ಲಿ 13 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 107 ರನ್ಗಳಿಸಿದ್ದಾರೆ. ಮತ್ತೊಬ್ಬ ಆರಂಭಿಕ ಬ್ಯಾಟ್ಸ್ಮನ್ ಹನುಮ ವಿಹಾರಿ 59 ರನ್‌ಗಳಿಸಿ ಔಟಾದರು. ಚೇತೇಶ್ವರ್ ಪೂಜಾರ 52 ರನ್‌ಗಳಿಸಿ ಗಿಲ್ ಜೊತೆಗೆ 4ನೇ ದಿನಕ್ಕೆ ಆಟವನ್ನು ಕಾಯ್ದಿರಿಸಿಕೊಂಡಿದ್ದಾರೆ. ಒಟ್ಟಾರೆ ಭಾರತ ತಂಡ 1 ವಿಕೆಟ್ ನಷ್ಟಕ್ಕೆ 234 ರನ್ಗಳಿಸಿದೆ.