ಮುಂಬೈ:ದಕ್ಷಿಣ ಆಫ್ರಿಕಾ ವಿರುದ್ಧ ಆರಂಭಗೊಳ್ಳಲಿರುವ ಮೂರು ಟೆಸ್ಟ್ ಪಂದ್ಯಗಳ ಕ್ರಿಕೆಟ್ ಸರಣಿಗಾಗಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಪ್ರಕಟಗೊಂಡಿದ್ದು, ಆರಂಭಿಕ ಕೆಎಲ್ ರಾಹುಲ್ ಜಾಗಕ್ಕೆ 20 ವರ್ಷದ ಉದಯೋನ್ಮುಖ ಆಟಗಾರ ಶುಬಮನ್ ಗಿಲ್ ಚಾನ್ಸ್ ಪಡೆದುಕೊಂಡಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ಆರಂಭಿಕ ಬ್ಯಾಟ್ಸ್ಮನ್ ಕನ್ನಡಿಗ ಕೆಎಲ್ ರಾಹುಲ್ ವಿರುದ್ಧ ಅನೇಕ ಟೀಕೆಗಳು ಕೇಳಿ ಬಂದ ಕಾರಣ, ಅವರ ಜಾಗಕ್ಕೆ ಶುಬಮನ್ ಆಯ್ಕೆಯಾಗಿದ್ದಾರೆ. ಆರಂಭಿಕನಾಗಿ ಹಾಗೂ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುವ ಕಲೆ ಕರಗತ ಮಾಡಿಕೊಂಡಿರುವ ಕಾರಣಕ್ಕಾಗಿ ಈ ಆಟಗಾರನಿಗೆ ಬಿಸಿಸಿಐ ಆಸಕ್ತಿ ತೋರಿದೆ. ತಂಡದಲ್ಲಿ ಉತ್ತಮ ಬ್ಯಾಕಪ್ ಪ್ಲೇಯರ್ ಆಗಿ ಇವರು ಇರಬಲ್ಲರು ಎಂದು ಎಂಎಸ್ಕೆ ಪ್ರಸಾದ್ ತಿಳಿಸಿದ್ದಾರೆ.