ಗಾಲೆ: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ 2ನೇ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ 186 ರನ್ ಗಳಿಸಿದ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್, ಡೇವಿಡ್ ಗೋವರ್ ಮತ್ತು ಕೆವಿನ್ ಪೀಟರ್ಸನ್ ದಾಖಲೆ ಮುರಿದು ಇಂಗ್ಲೆಂಡ್ ಪರ ಟೆಸ್ಟ್ ಕ್ರಿಕೆಟ್ನಲ್ಲಿ ಹೆಚ್ಚು ರನ್ ಗಳಿಸಿದ 4ನೇ ಬ್ಯಾಟ್ಸ್ಮನ್ ಎಂಬ ಶ್ರೇಯಕ್ಕೆ ಪಾತ್ರರಾಗಿದ್ದಾರೆ.
2ನೇ ಇನ್ನಿಂಗ್ಸ್ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ 381 ರನ್ ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಮೊದಲ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ ತಂಡ 9 ವಿಕೆಟ್ ಕಳೆದುಕೊಂಡು 339 ರನ್ ಗಳಿಸಿದೆ.
2ನೇ ದಿನ 67 ರನ್ ಗಳಿಸಿದ್ದ ಆಂಗ್ಲ ಪಡೆ ನಾಯಕ ಜೋ ರೂಟ್, ಇಂದು ಒಂದು ಕಡೆ ವಿಕೆಟ್ ಬೀಳುತ್ತಿದ್ದರೂ ಕ್ರೀಸ್ನಲ್ಲಿ ಗಟ್ಟಿಯಾಗಿ ನೆಲೆಯೂರಿ ತಮ್ಮ 19ನೇ ಶತಕ ಪೂರ್ಣಗೊಳಿಸಿದರು. ಅಲ್ಲದೆ ಅವರು 179 ರನ್ ಗಳಿಸಿದ್ದ ವೇಳೆ ಡೇವಿಡ್ ಗೋವರ್(8,231) ಹಾಗೂ ಕೆವಿನ್ ಪೀಟರ್ಸನ್(8,181) ಅವರನ್ನು ಹಿಂದಿಕ್ಕಿ ಇಂಗ್ಲೆಂಡ್ ಪರ ಗರಿಷ್ಠ ಗಳಿಸಿದ 4ನೇ ಬ್ಯಾಟ್ಸ್ಮನ್ ಎಂಬ ದಾಖಲೆಗೆ ಪಾತ್ರರಾದರು. ಅವರು ದಿನದಾಟದ ಕೊನೆಯ ಓವರ್ನಲ್ಲಿ 186 ರನ್ ಗಳಿಸಿದ್ದಾಗ ರನ್ ಔಟ್ ಆದರು.