ಕೊಲಂಬೊ: ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ತಂಡ ಶ್ರೀಲಂಕಾ ಪ್ರವಾಸ ಕೈಗೊಂಡಿದೆ. ಜನವರಿ 14 ರಿಂದ ಮೊದಲ ಟೆಸ್ಟ್ ಪಂದ್ಯ ಗಾಲೆ ಮೈದಾನದಲ್ಲಿ ಆರಂಭವಾಗಲಿದೆ.
ಶ್ರೀಲಂಕಾ ಪ್ರವಾಸದ ಬಗ್ಗೆ ಮಾತನಾಡಿರುವ ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆಂಡರ್ಸನ್, ಹೊಸ ಚೆಂಡಿನಲ್ಲಿ ರಿವರ್ಸ್ ಸ್ವಿಂಗ್ ಮೂಲಕ ಎದುರಾಳಿ ಬ್ಯಾಟ್ಸ್ಮನ್ಗಳನ್ನು ಕಟ್ಟಿ ಹಾಕುವ ಯೋಜನೆ ಹಾಕಿಕೊಂಡಿದ್ದೆನೆ ಎಂದು ಹೇಳಿದ್ದಾರೆ.
ಕಳೆದ ಬಾರಿಯ ಪ್ರವಾಸದಲ್ಲಿ ಜೇಮ್ಸ್ ಆಂಡರ್ಸನ್ ಆರು ಟೆಸ್ಟ್ ಪಂದ್ಯಗಳಲ್ಲಿ ಕೇವಲ 12 ವಿಕೆಟ್ ಪಡೆದಿದ್ದರು. "ಕಳೆದ ಎರಡು ಪ್ರವಾಸಗಳಲ್ಲಿ ಸ್ಪಿನ್ ಬೌಲಿಂಗ್ ಯಶಸ್ಸು ಕಂಡಿತ್ತು. ಸ್ಪಿನ್ ಬೌಲರ್ಗಳು ಬ್ಯಾಟ್ಸ್ಮನ್ಗಳ ಮೇಲೆ ಒತ್ತಡ ಹೇರಿ ವಿಕೆಟ್ ಪಡೆಯುತ್ತಾರೆ. ಆದರೆ ವೇಗೆದ ಬೌಲರ್ಗಳು ಲೈನ್ ಮತ್ತು ಲೆಂತ್ನಲ್ಲಿ ಬೌಲಿಂಗ್ ಮಾಡಬೇಕು. ಆಗ ಮಾತ್ರ ಅವರಿಗೆ ವಿಕೆಟ್ ಪಡೆಯಲು ಸಾಧ್ಯ ಎಂದು ಹೇಳಿದರು.