ಕ್ರೈಸ್ಟ್ಚರ್ಚ್:ಕಿವೀಸ್ ಬೌಲರ್ ಟಿಮ್ ಸೌಥಿ ಎರಡನೇ ಟೆಸ್ಟ್ ಪಂದ್ಯದಲ್ಲಿ ರನ್ ಮಷಿನ್ ವಿರಾಟ್ ಕೊಹ್ಲಿಯನ್ನು ಎಲ್ಬಿಡಬ್ಲ್ಯೂ ಬಲೆಗೆ ಬೀಳಿಸುವ ಮೂಲಕ ಹೆಚ್ಚು 10ನೇ ಬಾರಿ ಕೊಹ್ಲಿ ವಿರುದ್ಧ ಮೇಲುಗೈ ಸಾಧಿಸಿದ್ದಾರೆ.
ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ನ್ಯೂಜಿಲ್ಯಾಂಡ್ ಪ್ರವಾಸದಲ್ಲಿ ತಮ್ಮ ಬ್ಯಾಟಿಂಗ್ ವೈಫಲ್ಯವನ್ನು ಮುಂದುವರಿಸಿದ್ದಾರೆ. ಎರಡನೇ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಸೌಥಿ ಬೌಲಿಂಗ್ನಲ್ಲಿ ಎಲ್ಬಿ ಬಲೆಗೆ ಬಿದ್ದರು. ಅಂಪೈರ್ ತೀರ್ಪಿನ ವಿರುದ್ಧ ರಿವ್ಯೂವ್ ತೆಗದುಕೊಂಡರೂ ಸೌಥಿ ಬಲೆಯಿಂದ ತಪ್ಪಿಸಿಕೊಳ್ಳಲಾಗಲಿಲ್ಲ.
ಟಿಮ್ ಸೌಥಿ ಕೊಹ್ಲಿಯನ್ನು 10ನೇ ಬಾರಿ ಔಟ್ ಮಾಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿಹೆಚ್ಚು ರನ್ಮಷಿನ್ ವಿಕೆಟ್ ಪಡೆದ ಬೌಲರ್ ಎಂಬ ಶ್ರೇಯಕ್ಕೆ ಪಾತ್ರರಾದರು. ಸೌಥಿ ಟೆಸ್ಟ್ನಲ್ಲಿ 3 ಬಾರಿ, ಏಕದಿನ ಕ್ರಿಕೆಟ್ನಲ್ಲಿ 6 ಬಾರಿ, ಹಾಗೂ ಟಿ20 ಕ್ರಿಕೆಟ್ನಲ್ಲಿ ಒಮ್ಮೆ ಕೊಹ್ಲಿಯನ್ನು ಔಟ್ ಮಾಡಿದ್ದಾರೆ.