ಕೊಲಂಬೋ: ಇತ್ತೀಚೆಗೆ ಮ್ಯಾಚ್ ಫಿಕ್ಸಿಂಗ್ ಪ್ರಕರಣಗಳು ಏಷ್ಯಾದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶ್ರೀಲಂಕಾ ಸರ್ಕಾರ ಮ್ಯಾಚ್ ಫಿಕ್ಸಿಂಗ್ ಕ್ರಿಮಿನಲ್ ಅಪರಾಧವಾಗಿ ಪರಿಗಣಿಸಿ 10 ವರ್ಷ ಜೈಲು ಶಿಕ್ಷೆಯನ್ನು ವಿಧಿಸುವ ಐತಿಹಾಸಿಕ ಕಾಯ್ದೆಯನ್ನು ಜಾರಿಗೆ ತಂದಿದೆ.
ಶ್ರೀಲಂಕಾ, ಭಾರತ ಸೇರಿದಂತೆ ಏಷ್ಯಾದ ರಾಷ್ಟ್ರಗಳಲ್ಲಿ ಮ್ಯಾಚ್ ಫಿಕ್ಸಿಂಗ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಂಕಾ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಏಷ್ಯಾದಲ್ಲೇ ಮೊದಲ ಬಾರಿಗೆ ಶ್ರೀಲಂಕಾ ಮ್ಯಾಚ್ ಫಿಕ್ಸಿಂಗ್‌ಗೆ ಸಂಬಂಧಿಸಿದ ಭ್ರಷ್ಟಾಚಾರ ತಡೆಯಲು ಹೊಸ ಕಾನೂನು ಜಾರಿಗೆ ತಂದಿದ್ದು, ಅದರಂತೆ ಇನ್ಮುಂದೆ ಶ್ರೀಲಂಕಾದಲ್ಲಿ ಮ್ಯಾಚ್ ಫಿಕ್ಸಿಂಗ್‌ನಂತ ಅಪರಾಧಗಳು ಕ್ರಿಮಿನಲ್ ಅಪರಾಧಗಳಾಗಿ ಪರಿಗಣಿಸಲ್ಪಡುತ್ತವೆ.
ಕ್ರೀಡೆಗಳಿಗೆ ಸಂಬಂಧಿಸಿದ ಅಪರಾಧಗಳ ತಡೆಗಟ್ಟುವಿಕೆ (Prevention of Offences Related to Sports)' ಎಂಬ ಕಾಯ್ದೆಯನ್ನು ಶ್ರೀಲಂಕಾ ಸಂಸತ್ತಿನಲ್ಲಿ ಜಾರಿ ಮಾಡಲಾಗಿದ್ದು, ಈ ಕಾಯ್ದೆಯ ಪ್ರಕಾರ ಕ್ರೀಡೆಯಲ್ಲಿ ಭ್ರಷ್ಟಾಚಾರ ನಡೆಸುವವರಿಗೆ 10 ವರ್ಷಗಳ ಜೈಲು ಶಿಕ್ಷೆ ಜೊತೆಗೆ ವಿವಿಧ ರೀತಿಯ ದಂಡವನ್ನು ನಿಗದಿಪಡಿಸಿದೆ.