ಬೆಂಗಳೂರು: ದೇಶಿ ಕ್ರಿಕೆಟ್ನಲ್ಲಿ ಹೊಡಿ - ಬಡಿ ಆಟ ಐಪಿಎಲ್ನ 12ನೇ ಆವೃತ್ತಿಗೆ ಕೇವಲ ಮೂರು ದಿನಗಳು ಮಾತ್ರ ಬಾಕಿ ಉಳಿದಿವೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿದ್ದು, ಪಂದ್ಯ ಮತ್ತಷ್ಟು ರೋಚಕತೆ ಪಡೆದುಕೊಂಡಿದೆ.
ವಿರಾಟ್ ಕೊಹ್ಲಿ ನೇತೃತ್ವದ ಆರ್ಸಿಬಿ ತಂಡ ಈಗಾಗಲೇ ಕಠಿಣ ಅಭ್ಯಾಸ ನಡೆಸುತ್ತಿದ್ದು, ಈ ಬಾರಿ ಕಪ್ ಗೆಲ್ಲಲೇ ಬೇಕೆಂಬ ಹಠದಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಖತ್ ಬೆವರು ಹರಿಸುತ್ತಿದೆ. ಕಪ್ ಗೆಲ್ಲುವ ಆಸೆ ಹೊಂದಿರುವ ಕೊಹ್ಲಿ ಪಡೆಗೆ, ಇತ್ತೀಚೆಗೆ ಇಂಡಿಯನ್ ಸೂಪರ್ ಲೀಗ್ನಲ್ಲಿ ಬೆಂಗಳೂರಿಗೆ ಕಪ್ ತಂದು ಕೊಟ್ಟ ಅಂತಾರಾಷ್ಟ್ರೀಯ ಫುಟ್ಬಾಲ್ ಆಟಗಾರ, ಭಾರತ ತಂಡದ ನಾಯಕ ಸುನಿಲ್ ಚೆಟ್ರಿ ಸಾಥ್ ನೀಡಿದ್ದರು.