ಪಠಾಣ್ಕೋಟ್(ಪಂಜಾಬ್):ಟೀಂ ಇಂಡಿಯಾದ ಮಾಜಿ ಕ್ರಿಕೆಟರ್ ಸುರೇಶ್ ರೈನಾ ಸಂಬಂಧಿಕರ ಮನೆ ಮೇಲೆ ದರೋಡೆಕೋರರ ಗ್ಯಾಂಗ್ ದಾಳಿ ನಡೆಸಿದೆ.
ಪಂಜಾಬ್ನ ಪಠಾಣ್ಕೋಟ್ ಜಿಲ್ಲೆಯ ತಾರಿಯಾಲ್ ಹಳ್ಳಿಯಲ್ಲಿ ದರೋಡೆಕೋರರು ದಾಳಿ ನಡೆಸಿದ್ದು, 58 ವರ್ಷದ ರೈನಾ ಸಂಬಂಧಿಕರೊಬ್ಬರು ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಕುಟುಂಬದ ನಾಲ್ವರು ಸದಸ್ಯರಿಗೆ ಗಂಭೀರವಾದ ಗಾಯಗಳಾಗಿವೆ. ಮೃತ ವ್ಯಕ್ತಿಯನ್ನು ಸರ್ಕಾರಿ ಗುತ್ತಿಗೆದಾರ ಅಶೋಕ್ ಕುಮಾರ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಸಿಎಸ್ಕೆ ತಂಡಕ್ಕೆ ಮತ್ತೊಂದು ಆಘಾತ: ಐಪಿಎಲ್ನಿಂದ ಹೊರ ಬಂದ ಸುರೇಶ್ ರೈನಾ!