ಬೆಂಗಳೂರು: ಸಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಕರ್ನಾಟಕ ತಂಡ ತ್ರಿಪುರ ತಂಡವನ್ನು 10 ರನ್ಗಳಿಂದ ಮಣಿಸುವ ಮೂಲಕ ಟೂರ್ನಿಯಲ್ಲಿ 2ನೇ ಗೆಲುವು ದಾಖಲಿಸಿದೆ.
ಬೆಂಗಳೂರಿನಲ್ಲಿ ನಡದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಕರ್ನಾಟಕ ತಂಡ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 167 ರನ್ ಗಳಿಸಿದ್ದರು. ಸ್ಟಾರ್ ಬ್ಯಾಟ್ಸ್ಮನ್ ದೇವದತ್ ಪಡಿಕ್ಕಲ್ ಅಜೇಯ 99 ರನ್ಗಳಿಸಿದರೆ, ರೋಹನ್ ಕಡಂ 31 ರನ್ಗಳಿಸಿ ಸ್ಪರ್ಧಾತ್ಮಕ ಮೊತ್ತ ದಾಖಲಿಸಲು ನೆರವಾಗಿದ್ದರು.
ತ್ರಿಪುರ ಪರ ಎಂಬಿ ಮುರಾ ಸಿಂಗ್ 27ಕ್ಕೆ1, ರಾಣಾ ದತ್ತ 41ಕ್ಕೆ2, ಶಂಕರ್ ಪಾಲ್ 23ಕ್ಕೆ1 ಯು.ಯು.ಬೋಸ್ 9ಕ್ಕೆ 1 ವಿಕೆಟ್ ಪಡೆದಿದ್ದರು.
ಇನ್ನು 168 ರನ್ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ತ್ರಿಪುರ ತಂಡ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 157 ರನ್ಗಳಿಸಲಷ್ಟೇ ಶಕ್ತವಾಯಿತು. ನಾಯಕ ಮುರಾ ಸಿಂಗ್ ಕೇವಲ 33 ಎಸೆತಗಳಲ್ಲಿ 3 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 61 ರನ್ ಹಾಗೂ ರಜತ್ ದೇಯ್ 44 ರನ್ಗಳಿಸಿ ನಡೆಸಿದ ಹೋರಾಟ ವಿಫಲವಾಯಿತು.
ಕರ್ನಾಟಕ ಪರ ಮಿಥುನ್, ವಿ ಕೌಶಿಕ್, ಕೆ.ಗೌತಮ್ ಹಾಗೂ ಪ್ರವೀಣ್ ದುಬೆ ತಲಾ ಒಂದು ವಿಕೆಟ್ ಪಡೆದರು. ಟೂರ್ನಿಯಲ್ಲಿ 3 ಪಂದ್ಯಗಳಲ್ಲಿ 2 ಜಯ ಒಂದು ಸೋಲು ಕಂಡಿರುವ ಕರ್ನಾಟಕ ತಂಡ 8 ಆಂಕಗಳೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಇನ್ನು 3 ಪಂದ್ಯಗಳಲ್ಲೂ ಜಯ ಸಾಧಿಸಿರುವ ಪಂಜಾಬ್ 12 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಜಮ್ಮು ಮತ್ತು ಕಾಶ್ಮೀರ 8 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ.
ಇದನ್ನು ಓದಿ: ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ: 1 ರನ್ನಿಂದ ಶತಕ ತಪ್ಪಿಸಿಕೊಂಡ ಪಡಿಕ್ಕಲ್!