ಬೆಂಗಳೂರು :ಹಾಲಿ ಚಾಂಪಿಯನ್ ಕರ್ನಾಟಕ ತಂಡ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯ 2ನೇ ಪಂದ್ಯದಲ್ಲಿ ಪಂಜಾಬ್ ವಿರುದ್ಧ 9 ವಿಕೆಟ್ಗಳ ಹೀನಾಯ ಸೋಲು ಕಂಡಿದೆ.
ಬೆಂಗಳೂರಿನ ಆಲೂರು ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿ ಕರ್ನಾಟಕ ತಂಡ ಸಿದ್ಧಾರ್ಥ್ ಕೌಲ್ ದಾಳಿಗೆ ಸಿಲುಕಿ ಕೇವಲ 125 ರನ್ ಗಳಿಸಿತ್ತು. ರೋಹನ್ ಕಡಂ 32 ರನ್ ಗಳಿಸಿದ್ದೇ ತಂಡದ ಗರಿಷ್ಠ ಸ್ಕೋರ್ ಆಯಿತು.
126 ರನ್ಗಳ ಗುರಿ ಬೆನ್ನತ್ತಿದ ಪಂಜಾಬ್ ತಂಡ ಪ್ರಭಸಿಮ್ರಾನ್ ಸಿಂಗ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಕೇವಲ 14.4 ಓವರ್ಗಳಲ್ಲಿ ಒಂದು ವಿಕೆಟ್ ಕಳೆದುಕೊಂಡು ಗುರಿ ತಲುಪಿತು. 52 ಎಸೆತಗಳಲ್ಲಿ 9 ಬೌಂಡರಿ ಹಾಗೂ 5 ಸಿಕ್ಸರ್ಗಳ ಸಹಿತ 89 ರನ್ಗಳಿಸಿ ಸುಲಭ ಜಯಕ್ಕೆ ಕಾರಣರಾದರು. ಅಭಿಷೇಕ್ ಶರ್ಮಾ 30 ರನ್ ಗಳಿಸಿದರು.