ಮುಂಬೈ:ಐಸಿಸಿ ಟಿ-20 ವಿಶ್ವಕಪ್ನಲ್ಲಿ ಭಾರತೀಯ ಮಹಿಳಾ ಪಡೆ ಚೊಚ್ಚಲ ಬಾರಿಗೆ ಫೈನಲ್ ಪ್ರವೇಶ ಪಡೆದುಕೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಪುರುಷ ತಂಡದ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಸಹ ಆಟಗಾರ ಕೆಎಲ್ ರಾಹುಲ್, ಶಿಖರ್ ಧವನ್ ಹಾಗೂ ಮಾಜಿ ಆರಂಭಿಕ ಆಟಗಾರ ವಿರೇಂದ್ರ ಸೆಹ್ವಾಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಿಡ್ನಿಯಲ್ಲಿ ಇಂಗ್ಲೆಂಡ್-ಭಾರತದ ನಡುವೆ ಸೆಮಿಫೈನಲ್ ಪಂದ್ಯ ನಡೆಯಬೇಕಾಗಿತ್ತು. ಆದರೆ ಮಳೆಯಿಂದಾಗಿ ಪಂದ್ಯ ರದ್ಧುಗೊಂಡಿದ್ದು, ಲೀಗ್ ಹಂತದಲ್ಲಿ ಟೀಂ ಇಂಡಿಯಾ ಆಡಿರುವ ಎಲ್ಲ ಪಂದ್ಯಗಳಲ್ಲಿ ಗೆಲುವು ದಾಖಲು ಮಾಡಿದ್ದ ಕಾರಣ ರನ್ರೇಟ್ ಆಧಾರದ ಮೇಲೆ ಫೈನಲ್ಗೆ ಪ್ರವೇಶ ಪಡೆದುಕೊಂಡಿದೆ.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಇದೀಗ ಕ್ಯಾಪ್ಟನ್ ಕೊಹ್ಲಿ ಟ್ವೀಟ್ ಮಾಡಿದ್ದು, ವಿಶ್ವಕಪ್ ಫೈನಲ್ಗೆ ಪ್ರವೇಶ ಪಡೆದುಕೊಂಡಿರುವ ನಿಮಗೆ ಅಭಿನಂದನೆಗಳು. ನಿಮ್ಮ ಬಗ್ಗೆ ಹೆಮ್ಮೆ ಇದೆ. ಫೈನಲ್ ಪಂದ್ಯಕ್ಕೆ ಆಲ್ ದಿ ಬೆಸ್ಟ್ ಎಂದಿದ್ದಾರೆ. ಇನ್ನು ತಂಡದ ಮತ್ತೋರ್ವ ಆಟಗಾರ ಕೆಎಲ್ ರಾಹುಲ್ ಟ್ಟೀಟ್ ಮಾಡಿದ್ದು, ಫೈನಲ್ ಪ್ರವೇಶ ಪಡೆದುಕೊಂಡಿದ್ದಕ್ಕೆ ಕಂಗ್ರ್ಯಾಟ್ಸ್, ಫೈನಲ್ನಲ್ಲಿ ಗೆದ್ದು ಕಪ್ ಮನೆಗೆ ತೆಗೆದುಕೊಂಡು ಬನ್ನಿ ಎಂದಿದ್ದಾರೆ.
ಐಸಿಸಿ ಮಹಿಳಾ ವಿಶ್ವಕಪ್ನಲ್ಲಿ ಭಾರತದ ಸಾಧನೆ
ಇದೇ ವಿಷಯವಾಗಿ ಟ್ವೀಟ್ ಮಾಡಿರುವ ಶಿಖರ್ ಧವನ್, ಇಡೀ ಭಾರತವೇ ಹೆಮ್ಮೆ ಪಡುವಂತಹ ಕೆಲಸ ಮಾಡಿದ್ದೀರಿ. ಫೈನಲ್ಗಾಗಿ ಆಲ್ ದಿ ಬೆಸ್ಟ್ ಎಂದಿದ್ದಾರೆ. ಇನ್ನು ಸುರೇಶ್ ರೈನಾ, ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್, ವಿರೇಂದ್ರ ಸೆಹ್ವಾಗ್, ಮಿಥಾಲಿ ರಾಜ್ ಕೂಡ ಟ್ಟೀಟ್ ಮಾಡಿ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ.