ನವದೆಹಲಿ:ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಮೂರು ಟೆಸ್ಟ್ ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದರೆ ನಾಯಕತ್ವದ ಒತ್ತಡದಿಂದ ಅಜಿಂಕ್ಯ ರಹಾನೆ ತತ್ತರಿಸುವುದಿಲ್ಲ ಎಂದು ಬ್ಯಾಟಿಂಗ್ ಶ್ರೇಷ್ಠ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.
ಅಡಿಲೇಡ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ನಡೆಯಲಿರುವ ಅಹರ್ನಿಶಿ ಟೆಸ್ಟ್ ಪಂದ್ಯದ ನಂತರ ಕೊಹ್ಲಿ ಪಿತೃತ್ವ ರಜೆ ಮೇಲೆ ತವರಿಗೆ ವಾಪಸ್ ಆಗಲಿದ್ದಾರೆ. ಉಳಿದ ಮೂರು ಪಂದ್ಯಗಳಲ್ಲಿ ರಹಾನೆ, ತಂಡವನ್ನು ಮುನ್ನಡೆಸುವ ನಿರೀಕ್ಷೆಯಿದೆ.
"ಅಜಿಂಕ್ಯಾ ರಹಾನೆ ಮೇಲೆ ಒತ್ತಡವಿಲ್ಲ, ಏಕೆಂದರೆ ಅವರು ಎರಡು ಬಾರಿ ತಂಡವನ್ನು ಮುನ್ನಡೆಸಿ ಗೆದ್ದಿದ್ದಾರೆ. ಧರ್ಮಶಾಲಾದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾವನ್ನು ಮುನ್ನಡೆಸಿದ್ದು, ಈ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿತ್ತು. ಅಫಘಾನಿಸ್ತಾನ ವಿರುದ್ಧ ಕೂಡ ಟೀಂ ಇಂಡಿಯಾವನ್ನು ಮುನ್ನಡೆಸಿ ಗೆಲುವು ದಾಖಲಿಸಿದ್ದಾರೆ" ಎಂದು ಗವಾಸ್ಕರ್ ಹೇಳಿದ್ದಾರೆ.