ಕೇಪ್‌ಟೌನ್:ತರಬೇತಿ ಶಿಬಿರಕ್ಕೂ ಮುನ್ನ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿ ಇಬ್ಬರು ಆಟಗಾರರಿಗೆ ಕೋವಿಡ್ 19 ಪಾಸಿಟಿವ್ ವರದಿ ಬಂದಿದೆ ಎಂದು ಕ್ರಿಕೆಟ್ ದಕ್ಷಿಣ ಆಫ್ರಿಕಾ ಪ್ರಕಟಣೆ ಹೊರಡಿಸಿದೆ.
ಈಗಾಗಲೇ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್ಗಳ ಸರಣಿಯನ್ನು ರದ್ದುಗೊಳಿಸಿತ್ತು. ತರಬೇತಿ ಶಿಬಿರದ ಆರಂಭಕ್ಕೂ ಮುನ್ನ ನಡೆಸಿದ್ದ ಪರೀಕ್ಷೆಯಲ್ಲಿ ಇಬ್ಬರು ಆಟಗಾರರಿಗೆ ಪಾಸಿಟಿವ್ ದೃಢಪಟ್ಟಿದೆ ಎಂದು ಗುರುವಾರ ಸಿಎಸ್ಎ ಖಚಿತಪಡಿಸಿದೆ.