ಬ್ರಾಂಪ್ಟನ್:ಕೆನಡಾದಲ್ಲಿ ನಡೆಯುತ್ತಿರುವ ಗ್ಲೋಬಲ್ ಟಿ-20 ಪಂದ್ಯಗಳಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳುವಂತೆ ಮಾಜಿ ಕ್ರಿಕೆಟ್ ಆಟಗಾರ ನನ್ನನ್ನ ಸಂಪರ್ಕ ಮಾಡಿದ್ದರು ಎಂದು ಪಾಕ್ ತಂಡದ ಮಾಜಿ ಆಟಗಾರ ಉಮರ್ ಅಕ್ಮಲ್ ಹೊಸ ಬಾಂಬ್ ಸಿಡಿಸಿದ್ದಾರೆ.
ಕೆನಡಾದಲ್ಲಿ ನಡೆಯುತ್ತಿರುವ ಗ್ಲೋಬಲ್ ಟಿ-20 ಟೂರ್ನಿಯಲ್ಲಿ ಪಕ್ನ ಮಾಜಿ ವಿಕೆಟ್ ಕೀಪರ್ ಉಮರ್ ಅಕ್ಮಲ್ ವಿನ್ನಿಪೆಗ್ ಹವಾಕ್ಸ್ ತಂಡದವನ್ನ ಪ್ರತಿನಿಧಿಸುತ್ತಿದ್ದಾರೆ. ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳುವಂತೆ ಉಮರ್ ಅಕ್ಮಲ್ಗೆ ಪಾಕಿಸ್ತಾನ ತಂಡದ ಮಾಜಿ ಕ್ರಿಕೆಟ್ ಆಟಗಾರ ಮನ್ಸೂರ್ ಅಖ್ತರ್ ಸಂಪರ್ಕ ಮಾಡಿದ್ದರು ಎಂದು ಅಕ್ಮಲ್ ತಿಳಿಸಿದ್ದಾರೆ ಅಂತ ಪಾಕಿಸ್ತಾನ ಮೂಲದ ಮಾಧ್ಯಮವೊಂದು ವರದಿ ಮಾಡಿದೆ.