ನವದೆಹಲಿ:ತೆರೆಮರೆಯಲ್ಲಿ ಅಡಗಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರ ಕೈಗೊಂಡಿರುವ ಮಹತ್ವಾಕಾಂಕ್ಷೆಯ ಯೋಜನೆ ಖೇಲೋ ಇಂಡಿಯಾ ಯೋಜನೆಗೆ ಹೆಚ್ಚಿ ಒತ್ತು ನೀಡಲಾಗುವುದು ಎಂದು ಹಣಖಾಸು ಸಚಿವೆ ನಿರ್ಮಲ ನೀತಾರಾಮನ್ ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ.
ದೇಶದೆಲ್ಲೆಡೆ ಖೇಲೋ ಇಂಡಿಯಾ ಯೋಜನೆ ಕ್ರೀಡೆಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಿದೆ. ಖೇಲೋ ಇಂಡಿಯಾ ಯೋಜನೆಯಡಿ, ಯುವಕರಲ್ಲಿ ಎಲ್ಲಾ ರೀತಿಯ ಕ್ರೀಡೆಗಳನ್ನು ಉತ್ತೇಜಿಸುವ ಉದ್ದೇಶದಿಂದ ರಾಷ್ಟ್ರೀಯ ಕ್ರೀಡಾ ಶಿಕ್ಷಣ ಮಂಡಳಿಯನ್ನು ರಚಿಸಲಾಗುವುದು ಎಂದು ತಿಳಿಸಿದ್ದಾರೆ.