ನವದೆಹಲಿ:ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠದ ರಾಣಿ ಗ್ರಾಮದಲ್ಲಿ ಹಿಮನದಿ ದುರಂತ ಸಂಭವಿಸಿದ್ದು, ರಕ್ಷಣಾ ಕಾರ್ಯಗಳಿಗಾಗಿ ತಮ್ಮ ಒಂದು ಪಂದ್ಯದ ವೇತನವನ್ನು ದೇಣಿಗೆ ನೀಡುವುದಾಗಿ ಭಾರತ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಹಾಯ ಮಾಡುವಂತೆ ಕೋರಿದ್ದಾರೆ.
ಪ್ರಸ್ತುತ ಚೆನ್ನೈನಲ್ಲಿ ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ನಲ್ಲಿ ಆಡುತ್ತಿರುವ ಪಂತ್, ಈ ವಿಪತ್ತಿನಲ್ಲಿ ಪ್ರಾಣ ಕಳೆದುಕೊಂಡವರ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.