ಹೈದರಾಬಾದ್:ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪತ್ನಿ ಹಾಗೂ ಬಾಲಿವುಡ್ ನಟಿ ಹಾಗೂ ನಿರ್ಮಾಪಕಿ ಅನುಷ್ಕಾ ಶರ್ಮಾ ಸೋಮವಾರ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ.
ಕಳೆದ ಆಗಸ್ಟ್ 17 ರಂದು ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಜನವರಿಯಲ್ಲಿ ತಾವೂ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ ಎಂದು ತಾವೂ ಪೋಷಕರಾಗುತ್ತಿರುವ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದರು. ನಿನ್ನೆ ಮಧ್ಯಾಹ್ನ ನಮಗೆ ಹೆಣ್ಣು ಮಗು ಜನಿಸಿದೆ ಎಂದು ವಿರಾಟ್ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದ್ದರು.