ಪೋರ್ಟ್ ಆಫ್ ಸ್ಪೇನ್:ಪ್ರವಾಸಿ ಭಾರತದ ವಿರುದ್ಧದ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ನ ದೈತ್ಯ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಬ್ಯಾಟಿಂಗ್ನಲ್ಲಿ ಅಬ್ಬರಿಸಿ ಬೊಬ್ಬೆರೆದಿದ್ದಾರೆ.
ಈ ಹಿಂದಿನ ಪಂದ್ಯದಲ್ಲಿ ವೈಫಲ್ಯ ಅನುಭವಿಸಿದ್ದ ಗೇಲ್, ಇಂದಿನ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು. ತಾವು ಎದುರಿಸಿದ 41 ಎಸೆತಗಳಲ್ಲಿ 5 ಸಿಕ್ಸರ್ ಹಾಗೂ 8 ಬೌಂಡರಿ ಸೇರಿ 72ರನ್ಗಳಿಕೆ ಮಾಡಿದರು.
ವಿಶ್ವಕಪ್ ಟೂರ್ನಿಯ ವೇಳೆಯೇ ತಮ್ಮ ನಿವೃತ್ತಿ ಬಗ್ಗೆ ಸ್ಪಷ್ಟಪಡಿಸಿದ್ದ ಗೇಲ್, ಭಾರತದ ವಿರುದ್ಧ ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಯ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಹೇಳುವುದಾಗಿ ತಿಳಿಸಿದ್ದರು.
ಆದರೆ ಭಾರತ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ವೆಸ್ಟ್ ಇಂಡೀಸ್ ಆಯ್ಕೆ ಸಮಿತಿ ತಂಡವನ್ನು ಪ್ರಕಟಿಸಿ, ನಿವೃತ್ತಿ ಟೆಸ್ಟ್ ಪಂದ್ಯ ಆಡಲು ಬಯಸಿದ್ದ ವಿಂಡೀಸ್‍ನ ದೈತ್ಯ ಆಟಗಾರ ಕ್ರಿಸ್ ಗೇಲ್‍ರನ್ನು ಕಡೆಗಣಿಸಿತ್ತು. ಹೀಗಾಗಿ ಗೇಲ್ ಪಾಲಿಗೆ ಇಂದಿನ ಪಂದ್ಯ ಕೊನೆ ಅಂತಾರಾಷ್ಟ್ರೀಯ ಪಂದ್ಯವಾಗಿದ್ದು, ಅಧಿಕೃತ ವಿದಾಯ ಘೋಷಣೆ ಮಾಡಬೇಕಾಗಿದೆ. ಇಂದಿನ ಪಂದ್ಯದಲ್ಲಿ 72ರನ್ ಗಳಿಕೆ ಮಾಡಿ ವಿಕೆಟ್ ಒಪ್ಪಿಸುತ್ತಿದ್ದಂತೆ ಟೀಂ ಇಂಡಿಯಾ ಪ್ಲೇಯರ್ಸ್ ಅವರಿಗೆ ಅಭಿನಂದನೆ ಸಲ್ಲಿಕೆ ಮಾಡಿದರು.
ಕಳೆದ ಪಂದ್ಯದಲ್ಲೇ ಬ್ರೇನ್ ಲಾರಾ ದಾಖಲೆ ಬ್ರೇಕ್ ಮಾಡಿದ್ದ ಗೇಲ್,ವೆಸ್ಟ್ ಇಂಡೀಸ್ ಪರ ಅತಿ ಹೆಚ್ಚು ರನ್ಗಳಿಕೆ ಮಾಡಿರುವ ಬ್ಯಾಟ್ಸ್ಮನ್ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಇನ್ನು ಇಂದಿನ ಪಂದ್ಯದಲ್ಲಿ ಗೇಲ್ 301 ಜರ್ಸಿ ನಂಬರ್ ಹಾಕಿಕೊಂಡಿದ್ದು ವಿಶೇಷವಾಗಿತ್ತು. ಗೇಲ್ ಇಲ್ಲಿಯವರೆಗೂ 301 ಏಕದಿನ ಪಂದ್ಯಗಳನ್ನಾಡಿದ್ದಾರೆ.