ಮುಂಬೈ:ಕೊರೊನಾ ವೈರಸ್ ವಿರುದ್ಧ ಹೋರಾಟ ನಡೆಸಿರುವ ಮುಂಬೈ ಪೊಲೀಸರಿಗೆ ವಿರುಷ್ಕಾ ದಂಪತಿ 10 ಲಕ್ಷ ರೂ. ದೇಣಿಗೆ ನೀಡಿದ್ದು, ಅವರ ಸೇವೆಗೆ ಸಾಥ್ ನೀಡಿದ್ದಾರೆ.
ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ 5 ಲಕ್ಷ ರೂ. ಅನುಷ್ಕಾ ಶರ್ಮಾ 5 ಲಕ್ಷ ರೂ ದೇಣಿಗೆ ನೀಡಿರುವ ಬಗ್ಗೆ ಮುಂಬೈ ಪೊಲೀಸ್ ಖಚಿತಪಡಿಸಿದ್ದು, ಮುಂಬೈ ಪೊಲೀಸ್ ಕಮಿಷನರ್ ಪರಂವೀರ್ ಸಿಂಗ್ ಇದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿ ಇಬ್ಬರಿಗೂ ಧನ್ಯವಾದ ಹೇಳಿದ್ದಾರೆ.
ಕೊರೊನಾ ವೈರಸ್ ಸೋಂಕಿನ ವಿರುದ್ಧ ಹೋರಾಟಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪಿಎಂ-ಕೇರ್ಸ್ ಮತ್ತು ಮುಖ್ಯಮಂತ್ರಿ (ಮಹಾರಾಷ್ಟ್ರ) ಪರಿಹಾರ ನಿಧಿಗೆ ನೆರವು ನೀಡುವುದಾಗಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಹಾಗೂ ನಟಿ ಅನುಷ್ಕಾ ಶರ್ಮಾ ಹೇಳಿಕೊಂಡಿದ್ದರು.
ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಕೋವಿಡ್-19 ವಿರುದ್ಧದ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಸರ್ಕಾರ ನೀಡಿರುವ ಗೈಡ್ಲೈನ್ಸ್ ತಪ್ಪದೇ ಅನುಸರಿಸುವಂತೆ ಮನವಿ ಮಾಡಿದ್ದಾರೆ.