ಕರ್ನಾಟಕ

karnataka

ETV Bharat / sports

ಮೊದಲ ಮಗುವಿನ ನಿರೀಕ್ಷೆಯಲ್ಲಿ ವಿರಾಟ್​ ಕೊಹ್ಲಿ - ಅನುಷ್ಕಾ ಶರ್ಮಾ ದಂಪತಿ

ಭಾರತ ತಂಡದ ನಾಯಕ ವಿರಾಟ್​ ಕೊಹ್ಲಿ ಹಾಗೂ ಬಾಲಿವುಡ್​ ನಟಿ ಅನುಷ್ಕಾ ಶರ್ಮಾ 2017ರ ಡಿಸೆಂಬರ್​ ತಿಂಗಳಲ್ಲಿ ಇಟಲಿಯಲ್ಲಿ ವಿವಾಹವಾಗಿದ್ದರು.

ವಿರುಷ್ಕಾ ದಂಪತಿ
ವಿರುಷ್ಕಾ ದಂಪತಿ

By

Published : Aug 27, 2020, 12:06 PM IST

ಹೈದರಾಬಾದ್:ಭಾರತ ಕ್ರಿಕೆಟ್​ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್​ ನಟಿ ಹಾಗೂ ನಿರ್ಮಾಪಕ ಪತ್ನಿ ಅನುಷ್ಕಾ ಶರ್ಮಾ ದಂಪತಿ ಮೊದಲ ಮಗುವಿಗೆ ನಿರೀಕ್ಷೆಯಲ್ಲಿದ್ದಾರೆ.

ಕೊಹ್ಲಿ ಗುರುವಾರ ಟ್ವಿಟರ್‌ನಲ್ಲಿ ಈ ಸಂತೋಷದ ವಿಚಾರವನ್ನು ಘೋಷಣೆ ಮಾಡಿದ್ದಾರೆ. ತಮ್ಮ ಮತ್ತು ಅನುಷ್ಕಾರ ಬೇಬಿ ಬಂಪ್​ ಫೋಟೋವನ್ನು ಹಂಚಿಕೊಂಡಿರುವ ಅವರು 2021 ಜನವರಿಯಲ್ಲಿ ನಾವು ಮೂವರಾಗಲಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಡಿಸೆಂಬರ್ 11,2017 ರಂದು ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ABOUT THE AUTHOR

...view details